For the best experience, open
https://m.kannadavani.news
on your mobile browser.
Advertisement

Belikeri ಅದಿರು ಪ್ರಕರಣ | ಕಾರವಾರ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು ವಿಸ್ತರಣೆ.

Karwar: In the Belekeri iron ore scam case, the Karnataka High Court has extended interim medical bail for MLA Satish Sail until Thursday. The court directed the ED to appoint a medical expert to assess his health condition.
09:45 PM Nov 10, 2025 IST | ಶುಭಸಾಗರ್
Karwar: In the Belekeri iron ore scam case, the Karnataka High Court has extended interim medical bail for MLA Satish Sail until Thursday. The court directed the ED to appoint a medical expert to assess his health condition.
belikeri ಅದಿರು ಪ್ರಕರಣ   ಕಾರವಾರ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು ವಿಸ್ತರಣೆ

Belikeri ಅದಿರು ಪ್ರಕರಣ | ಕಾರವಾರ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು ವಿಸ್ತರಣೆ.

ಕಾರವಾರ :- ಬೇಲೆಕೇರಿ(Belikeri) ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಈಡಿ) ದಾಖಲಿಸಿರುವ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ ಅವರಿಗೆ ಗುರುವಾರದವರೆಗೆ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ.

Advertisement

ಇದೇ ವೇಳೆ, ಸೈಲ್‌ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ವೃತ್ತಿಪರ ವೈದ್ಯರ ಹೆಸರನ್ನು ಸೂಚಿಸುವಂತೆ ಈಡಿಗೆ ನ್ಯಾಯಾಲಯ ನಿರ್ದೇಶಿಸಿದೆ.

Belikeri case| ಅಕ್ರಮ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್ ಮಧ್ಯಂತರ  ಜಾಮೀನು ರದ್ದು

ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಹೊರಡಿಸಿರುವ ಜಾಮೀನುರಹಿತ ಬಂಧನ ವಾರೆಂಟ್‌ ( NBW) ಹಾಗೂ ಈಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ರದ್ದುಪಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸತೀಶ್‌ ಸೈಲ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಸತೀಶ್‌ ಸೈಲ್‌ಗೆ ಮಂಜೂರು ಮಾಡಲಾಗಿರುವ ವೈದ್ಯಕೀಯ ಮಧ್ಯಂತರ ಜಾಮೀನನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ, ಸೈಲ್‌ ಅವರ ಆರೋಗ್ಯ ಪರಿಸ್ಥತಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಅದನ್ನು ಖಾತ್ರಿಪಡಿಸಲು ಯಾವ ವೈದ್ಯರನ್ನು ನೇಮಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಈಡಿ ಸಲಹೆ ನೀಡಬೇಕ ಎಂದು ಆದೇಶಿಸಿತು.

ಸತೀಶ್‌ ಸೈಲ್‌ ಅವರು ಅನಾರೋಗ್ಯಪೀಡತರಾಗಿದ್ದರೆ, ಅವರು ಅನಾರೋಗ್ಯಪೀಡಿತರಾಗಿರಬೇಕು. ಅದರಲ್ಲಿ ಎರಡು ಮಾತಿಲ್ಲ. ಅವರ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳನ್ನು ಖಾತ್ರಿಪಡಿಸಬೇಕು

ಈ ವಿಚಾರದ ಕುರಿತು ಯೋಚಿಸಿ, ನ್ಯಾಯಾಲಯಕ್ಕೆ ತಿಳಿಸಿ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ನವೆಂಬರ್‌ 13ಕ್ಕೆ ಮುಂದೂಡಿದೆ.

ನ.9 ರಂದು ಇಡಿ ಸತೀಶ್ ಸೈಲ್ ಗೆ ಸಂಬಂದಿಸಿದ 21 ಕೋಟಿ ಮೌಲ್ಯದ ಆಸ್ತಿ ಜಪ್ತಿ ಪಡಿಸಿಕೊಂಡಿತ್ತು. ಇದಲ್ಲದೇ ಜಾಮೀನು ಪಡೆದಿದ್ದ ಸೈಲ್ ಗೆ ಶುಕ್ರವಾರ ಜಾಮೀನು ಸಹ ರದ್ದುಮಾಡಿ ಶಾಕ್ ನೀಡಿತ್ತು. ಇದೀಗ ಮತ್ತೆ ಜಾಮೀನು ಮಂಜೂರಾಗಿದ್ದು ಕಾರವಾರದಲ್ಲಿ ಸೈಲ್ ಅಭಿಮಾನಿಗಳಿಗೆ ಸಂತಸ ತಂದಿದೆ.

ನ್ಯಾಯಾಲಯ (court) ದಲ್ಲಿ ವಾದ ಹೇಗಿತ್ತು?

ಶಾಸಕ ಸತೀಶ್  ಸೈಲ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿ, ಸೆಪ್ಟೆಂಬರ್ 11ರಂದು ಅರ್ಜಿದಾರರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ಮಂಜೂರು ಮಾಡಲಾಗಿತ್ತು. ಸೈಲ್ ಅವರು ಸ್ಕೂಲಕಾಯ, ನಿದ್ರಾಹೀನತೆಯಿಂದ ಬಳಲುತ್ತಿದ್ದು, ಅವರಿಗೆ ಯಕೃತ್ ಬದಲಾವಣೆ ಮಾಡಬೇಕು ಎಂದು ಇಎಸ್‌ಐ ಆಸ್ಪತ್ರೆ ವರದಿ ನೀಡಿರುವುದನ್ನು ಈಡಿ ದಾಖಲೆಗಳೇ ಹೇಳುತ್ತವೆ. ಅರ್ಜಿದಾರರು ಮಂಡಿಸಿರುವ ಯಾವುದೇ ದಾಖಲೆ ಸುಳ್ಳು ಅಥವಾ ಸರಿ ಇಲ್ಲ ಎಂದು ವಿಚಾರಣಾ ನ್ಯಾಯಾಲಯ ಹೇಳಿಲ್ಲ ಎಂದರು.

Karwar |ನಿಲ್ಲಿಸಿದ್ದ ಲಾರಿಗೆ ಷಾರ್ಟ ಸರ್ಕ್ಯೂಟ್ ನಿಂದ ಬೆಂಕಿ |ಹಾನಿ

ಅಕ್ಟೋಬರ್ 4 ಮತ್ತು 5ರಂದು ಸೈಲ್‌ ಅವರ ಹೇಳಿಕೆಯನ್ನು ಈಡಿ ದಾಖಲಿಸಿಕೊಂಡಿದೆ. ಅಕ್ಟೋಬ‌ರ್ 7ರಂದು ದೂರು ದಾಖಲಿಸಿದೆ. ಸೈಲ್ ಅವರ ಒಂದೇ ಒಂದು ವೈದ್ಯಕೀಯ ದಾಖಲೆ ಸುಳ್ಳು ಎಂದು ಹೇಳಲಾಗಿಲ್ಲ. ಆದರೆ, ನೀವು ಅನಾರೋಗ್ಯಪೀಡಿತ ವಿಭಾಗಕ್ಕೆ ಬರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ಅಗತ್ಯತೆ ಇನ್ನೂ ನಿಮ್ಮ ಪ್ರಕರಣದಲ್ಲಿ ಬಾಕಿ ಇದೆ ಎಂದು ವಿಶೇಷ ನ್ಯಾಯಾಲಯ ಹೇಳಿದೆ ಎಂದು ಹೈಕೋರ್ಟ್‌ಗೆ ವಿವರಿಸಿದರು.

ಇಡಿ (ED)ವಾದ ಏನು?

ಈ ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್, ಚೌಟ ಅವರು ಓದಿದು ಆದೇಶಗಳು ನನ್ನ ಬಳಿ ಇಲ್ಲ. ವಿಶೇಷ ನ್ಯಾಯಾಲಯ ಸೈಲ್ ಅವರನ್ನು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದ ಬಳಿಕ ಅವರು ಅನಾರೋಗ್ಯದ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಇಎಸ್‌ಐ(ESI) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವರದಿ ಆಧರಿಸಿ ಸೈಲ್ ಅವರನ್ನು ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆನಂತರ, ವಿಶೇಷ ನ್ಯಾಯಾಲಯ ಸೈಲ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ಮಂಜೂರು ಮಾಡಿತ್ತು ಎಂದು ತಿಳಿಸಿದರು.

Karnataka |ಶಾರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಪರಿಸರ ಸಚಿವಾಲಯದಿಂದ ಬ್ರೇಕ್ !

ಸೈಲ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಬೇಕು ಎಂದು ಇಎಸ್‌ಐ ಆಸ್ಪತ್ರೆಯ ವರದಿಯಲ್ಲಿ ಹೇಳಲಾಗಿದೆ. ಆದರೆ, ಸೈಲ್ ಅವರು ಕಾರವಾರ(karwar)ಅಂಕೋಲಾ, ಶಿರಸಿ ಎಲ್ಲ ಕಡೆ ಓಡಾಡುತ್ತಿದ್ದು, ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸಿರುವುದು ತಿಳಿದು ಬಂದಿದೆ ಎಂದರು. ಆಗ ನ್ಯಾಯಪೀಠ, ಇದು ನಿಮ್ಮರಿಸ್ಕ್‌ಗೆ ಬಿಟ್ಟ ವಿಚಾರವಾಗಿದ್ದು, ನೀವು ರಿಸ್ಕ್ ತೆಗೆದುಕೊಳ್ಳಲು ಮುಂದಾದರೆ ನಿಮ್ಮ ಕೋರಿಕೆ ಪರಿಗಣಿಸಲಾಗುವುದು ಎಂದು ಹೇಳಿತು.

ಅದಕ್ಕೆ ಕಾಮತ್ ಅವರು, ವೈದ್ಯಕೀಯ ವರದಿ ಮತ್ತು ಸೈಲ್ ಪರಿಸ್ಥಿತಿಯನ್ನು ಪರಿಶೀಲಿಸುವ ಕುರಿತು ನ್ಯಾಯಾಲಯ ಹೇಳಿರುವುದಕ್ಕೆ ನಮ್ಮ ಒಪ್ಪಿಗೆ ಇದೆ. ಸಹಜವಾಗಿ ಹೇಳಬೇಕೆಂದರೆ ನಾವು ಆರೋಗ್ಯದ ವಿಚಾರದಲ್ಲಿ ತಜ್ಞರಲ್ಲ ಎಂದರು. ಆಗ ನ್ಯಾಯಪೀಠ, ಸೈಲ್ ಅವರ ಆರೋಗ್ಯ ಪರಿಸ್ಥಿತಿಯ ಕುರಿತು ತಿಳಿದು, ಆನಂತರ ನೋಡೋಣ ಎಂದು ನುಡಿಯಿತು. ಈ ವೇಳೆ, ಮಧ್ಯಪ್ರವೇಶಿಸಿದ ಚೌಟ ಅವರು, ವೈದ್ಯಕೀಯ ಮಂಡಳಿಯನ್ನು ರಚಿಸಿದರೆ ಆರೋಗ್ಯ ತಪಾಸಣೆಗೆ ಒಳಗಾಗಲು ಸೈಲ್ ಸಿದ್ಧರಿದ್ದಾರೆ ಎಂದರು.

ವಾದ ಮುಂದುವರಿಸಿದ ಕಾಮತ್ ಅವರು, ಜಾಮೀನು ರದ್ದತಿ ವಿಚಾರ ಏಕೆ ಬಂದಿದೆ ಎಂಬುದನ್ನು ನ್ಯಾಯಾಲಯ ಪರಿಶೀಲಿಸಬೇಕು. ಸೈಲ್ ಆಸ್ಪತ್ರೆಯಲ್ಲಿರಬೇಕು ಎಂದು ವರದಿ ಹೇಳಿದ್ದರೂ ಅದನ್ನು ಪಾಲಿಸಲಾಗುತ್ತಿಲ್ಲ. ಇಎಸ್‌ಐ ಆಸ್ಪತ್ರೆಯ ವರದಿಯ ಅನುಪಾಲನೆಯನ್ನು ಸೈಲ್ ಮಾಡಬೇಕು. ಸೈಲ್ ಸಹಜವಾಗಿ ಓಡಾಟ ನಡೆಸುವಂತಿಲ್ಲ. ಒಂದು ಕಡೆ ಅನಾರೋಗ್ಯಪೀಡಿತ ಎಂದು ದಾಖಲೆ ತೋರಿಸುತ್ತಾರೆ. ಮತ್ತೊಂದೆಡೆ ಮುಕ್ತವಾಗಿ ಓಡಾಟ ನಡೆಸುತ್ತಿದ್ದಾರೆ. ಸಮೀಪದ ಒಳ್ಳೆಯ ಆಸ್ಪತ್ರೆಯಿಂದ ನೂರಾರು ಕಿ.ಮೀ. ದೂರ ಓಡಾಡುತ್ತಿದ್ದಾರೆ. ಈ ರಿಸ್ಕ್ ಅನ್ನು ಸೈಲ್‌ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ನ್ಯಾಯಾಲಯದ ಮುಂದೆ ಸುಳ್ಳನ್ನು ಬಿಂಬಿಸುತ್ತಿದ್ದಾರೆ ಎಂದರ್ಥ ಎಂದರು.

ಇದಕ್ಕೆ ನ್ಯಾಯಪೀಠ, ಎಲ್ಲಿ ಸೈಲ್ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂಬುದನ್ನು ತಿಳಿಸಿ. ಆರೋಗ್ಯ ಪರಿಸ್ಥಿತಿಯ ಸುರಕ್ಷಿತ ಪರಿಶೀಲನೆ ಬಗ್ಗೆ ತಿಳಿಸಿ ಎಂದು ಹೇಳಿತು. ಒಂದೆರಡು ದಿನ ಕಾಲಾವಕಾಶ ನೀಡಿದರೆ ತಿಳಿಸಲಾಗುವುದು ಎಂದು ಕಾಮತ್ ಹೇಳಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಮಧ್ಯಂತರ ವೈದ್ಯಕೀಯ ಜಾಮೀನನ್ನು ವಿಸ್ತರಿಸಿ, ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ