ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Bhatkal :ಮೂತ್ರ ವಿಸರ್ಜನೆಗೆ ಹೋದ ವಿದ್ಯಾರ್ಥಿ ತೆರದ ಬಾವಿಗೆ ಬಿದ್ದು ಸಾವು

ಕಾರವಾರ :-:ಶಾಲೆಯಿಂದ (School) ಆಯೋಜಿಸಲಾಗಿದ್ದ ಪ್ರವಾಸಕ್ಕೆ ಬ ಬಂದಿದ್ದ ವಿದ್ಯಾರ್ಥಿಯೋರ್ವ ಮೂತ್ರ ವಿಸರ್ಜನೆಗೆ ತೆರಳಿ ತೆರದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಭಟ್ಕಳ (bhatkal) ನಗರದಲ್ಲಿ ನಡೆದಿದೆ.
09:48 PM Dec 18, 2024 IST | ಶುಭಸಾಗರ್

Bhatkal :ಮೂತ್ರ ವಿಸರ್ಜನೆಗೆ ಹೋದ ವಿದ್ಯಾರ್ಥಿ ತೆರದ ಬಾವಿಗೆ ಬಿದ್ದು ಸಾವು

Advertisement

ಕಾರವಾರ :-:ಶಾಲೆಯಿಂದ (School) ಆಯೋಜಿಸಲಾಗಿದ್ದ ಪ್ರವಾಸಕ್ಕೆ ಬ ಬಂದಿದ್ದ ವಿದ್ಯಾರ್ಥಿಯೋರ್ವ ಮೂತ್ರ ವಿಸರ್ಜನೆಗೆ ತೆರಳಿ ತೆರದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಭಟ್ಕಳ (bhatkal) ನಗರದಲ್ಲಿ ನಡೆದಿದೆ.

ಕೊಪ್ಪಳ (koppa) ಜಿಲ್ಲೆಯ ಯಲಬುರ್ಗ (yalaburga) ತಾಲೂಕಿನ ಗಾಣದಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿರುಪಾದಿ ದುರ್ಗಪ್ಪ ಹರಿಜನ (14) ಮೃತ ದುರ್ದೈವಿ.

ಭಟ್ಕಳ ನಗರದ ತಾಲೂಕು ಪಂಚಾಯತ್ ಎದುರಿನ ಖಾಲಿ ಜಾಗದಲ್ಲಿ ಮೂತ್ರ ವಿಸರ್ಜನೆಗೆಂದು ಹೋದಾಗ ತೆರೆದ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ.

Advertisement

ಗಾಣದಾಳ ಶಾಲೆಯ 100 ವಿದ್ಯಾರ್ಥಿಗಳು ಜೋಗ ಫಾಲ್ಸ್ ಕೊಲ್ಲೂರು ಮತ್ತಿತರ ಕಡೆ ಪ್ರವಾಸಕ್ಕೆಂದು ಎರಡು ಬಸ್ಸಿನಲ್ಲಿ ಆಗಮಿಸಿದ್ದು ಇವರೊಂದಿಗೆ 13 ಜನ ಶಿಕ್ಷಕರು ಸಹ ಇದ್ದರು. ನಿನ್ನೆ ರಾತ್ರಿ ಗಾಣದಾಳದಿಂದ ಹೊರಟಿದ್ದ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಜೋಗ ಜಲಪಾತ ವೀಕ್ಷಿಸಿದ್ದರು.

ಇದನ್ನೂ ಓದಿ:-BHATKAL ಶಾಲಾ ಟೆಂಪೋಗೆ ಆಕಸ್ಮಿಕ ಬೆಂಕಿ: ತಪ್ಪಿದ ಬಾರಿ ಅನಾಹುತ

ಅಲ್ಲಿಂದ ಕೊಲ್ಲೂರಿಗೆ ತೆರಳಲು ಅರಬೈಲ್ ಘಟ್ಟದ ಮೂಲಕ ಹೊನ್ನಾವರ ಮಾರ್ಗವಾಗಿ ತೆರಳುತ್ತಿದ್ದರು. ಮಾರ್ಗ ಮಧ್ಯ ಭಟ್ಕಳದಲ್ಲಿ ಮಾತ್ರೆ ಖರೀದಿಗಾಗಿ ನಿಲ್ಲಿಸಲಾಗಿತ್ತು. ತಾಲೂಕು ಪಂಚಾಯತ್ ಕಚೇರಿ ಎದುರಿನ ಔಷಧಿ ಅಂಗಡಿಯಲ್ಲಿ ಮಾತ್ರೆ ಖರೀದಿಸಲು ವಾಹನ ನಿಲ್ಲಿಸಲಾಗಿತ್ತು. ಈ ಸಂದರ್ಭ ಕೆಲವು ಬಾಲಕರು ಮೂತ್ರ ವಿಸರ್ಜನೆಗೆಂದು ಔಷಧಿ ಅಂಗಡಿಯ ಹಿಂದಿರುವ ಖುಲ್ಲಾ ಜಾಗಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕತ್ತಲಾಗಿದ್ದರಿಂದ ತಡೆಗೋಡೆ ಇಲ್ಲದ ತೆರೆದ ಬಾವಿಗೆ ಮೃತ ಬಾಲಕ ಬಿದ್ದಿದ್ದಾನೆ.

ಇದನ್ನೂ ಓದಿ:-Bhatkal :ಪುರಸಭಾ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಆತ ಪಡೆದಿದ್ದ ಹಣವೆಷ್ಟು ಗೊತ್ತಾ?

ತಕ್ಷಣ ಜೊತೆಗಿದ್ದ ಬಾಲಕರು ಕೂಗಿದ್ದರಿಂದ ಸ್ಥಳೀಯರು ದೌಡಾಯಿಸಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕನನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಅಸ್ವಸ್ಥಗೊಂಡ ಬಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಸ್ಪಂದಿಸದೆ ಮೃತಪಟ್ಟಿದ್ದಾನೆ.
ಭಟ್ಕಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Tags :
AccidentBhatkalIndianewsKarwarOpenWellSafetyConcernsSchoolTripStudentDeathTragedyWellFall
Advertisement
Next Article
Advertisement