ಕಾರವಾರ :- ಆಡಳಿತ ನಡೆಸುವ ಜಿಲ್ಲಾ ಪ್ರವಾಸೋಧ್ಯಮ ಕಚೇರಿಯಲ್ಲಿ ಗೌಪ್ಯವಾಗಿ ಬೆಡ್ ರೂಮ್ ಇರುವುದು ಪತ್ತೆಯಾದ ಘಟನೆ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಜಯಂತ್ ರನ್ನು ಅಮಾನತು ಮಾಡುವಂತೆ ಪ್ರವಾಸೋದ್ಯಮ ಸಚಿವ ಹೆಚ್. ಕೆ ಪಾಟೀಲ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕನ್ನಡವಾಣಿಯಲ್ಲಿ ಈ ಕುರಿತು ವಿಸ್ರುತ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಜಯಂತ್ ರವರ ಅಮಾನತಿಗೆ ಸಚಿವರು ಸೂಚಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್ ಕಾರವಾರದಲ್ಲಿ ಪ್ರವಾಸೋದ್ಯಮ ಅಧಿಕಾರಿ ಬಗ್ಗೆ ಮಾಹಿತಿ ಬಂದಿದೆ. ಇಂಥ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. ಇಲಾಖೆ ನಿರ್ದೇಶಕರ ಜೊತೆ ಮಾತನಾಡಿದ್ದೇನೆ. ಈ ಅಧಿಕಾರಿಯನ್ನು ಅಮಾನತು ಮಾಡಲು ಸೂಚಿಸಿದ್ದೇನೆ ಎಂದರು.