For the best experience, open
https://m.kannadavani.news
on your mobile browser.
Advertisement

Bigg boss| ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ರೀ ಓಪನ್‌

Bigg boss Following Deputy CM DK Shivakumar’s orders, the Bigg Boss Kannada house in Bidadi was reopened at midnight. Officials unsealed the Jalewood Studio and shifted contestants back inside. Final decision on resuming shooting to be made soon.
10:23 AM Oct 09, 2025 IST | ಶುಭಸಾಗರ್
Bigg boss Following Deputy CM DK Shivakumar’s orders, the Bigg Boss Kannada house in Bidadi was reopened at midnight. Officials unsealed the Jalewood Studio and shifted contestants back inside. Final decision on resuming shooting to be made soon.
bigg boss  ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ರೀ ಓಪನ್‌

Bigg boss| ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ರೀ ಓಪನ್‌

ಪ್ರಕೃತಿ ಮೆಡಿಕಲ್ ,ಕಾರವಾರ.

ರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡದಿ ಬಳಿ ಇರುವ ಬಿಗ್‌ಬಾಸ್‌ (Bigg Boss) ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳನ್ನು ಶಿಫ್ಟ್‌ ಮಾಡಲಾಗಿದೆ.

Advertisement

ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್ ಗೌಡ, ತಹಶಿಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್‌ ಸ್ಟುಡಿಯೋದ ಗೇಟ್‌ ಸೀಲ್‌ ಓಪನ್‌ ಮಾಡಿದ್ದಾರೆ.

ಈ ವೇಳೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಯಶವಂತ್ ವಿ ಗುರುಕರ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ತೆರೆದಿದ್ದೇವೆ. ಜಾಲಿವುಡ್‌ ಸಂಪೂರ್ಣ ಕಾರ್ಯಾಚರಣೆ ನಡೆಸಲು ಅವಕಾಶ ನೀಡಿಲ್ಲ. ಕೇವಲ ಬಿಗ್ ಬಾಸ್ ಶೋ ಸ್ಪರ್ಧಿಗಳು, ಸಿಬ್ಬಂದಿ ಓಡಾಟ ಹಾಗೂ ಅಗತ್ಯ ವಸ್ತುಗಳ ಬಳಕೆಗೆ ಅವಕಾಶ ಕೊಡಲಾಗಿದೆ. ಬಿಗ್ ಬಾಸ್ ಶೂಟಿಂಗ್ ಆರಂಭದ ಬಗ್ಗೆ ನಾಳೆ ತೀರ್ಮಾನ ಆಗಲಿದೆ ಎಂದು ತಿಳಿಸಿದರು.

ಸದ್ಯಕ್ಕೆ ಬಿಗ್‌ಬಾಸ್‌ ಶೋ ನಡೆಯುವ ಜಾಗ ಮಾತ್ರ ತೆರೆಯಲಾಗಿದೆ. ಸರ್ಕಾರದಿಂದ ಅನುಮತಿ ಸಿಕ್ಕಿದ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಬಿಗ್‌ ಬಾಸ್‌ ಸಿಬ್ಬಂದಿ ಕ್ಯಾಬ್‌ ಮೂಲಕ ಆಗಮಿಸಿದ್ದಾರೆ. ಇದರ ಜೊತೆ ಬಿಡದಿಯ ರೆಸಾರ್ಟ್‌ನಲ್ಲಿರುವ ಸ್ಪರ್ಧಿಗಳು ಮನೆಗೆ ಬಂದಿದ್ದಾರೆ

ಬಿಗ್ ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ಅನ್ನು ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಾನು ನಿರ್ದೇಶನ ನೀಡಿದ್ದೇನೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದರು.

ಪರಿಸರ ನಿರ್ವಹಣೆ ಪ್ರಮುಖ ಆದ್ಯತೆಯಾಗಿ ಉಳಿದಿದ್ದರೂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಉಲ್ಲಂಘನೆಗಳನ್ನು ಪರಿಹರಿಸಲು ಸ್ಟುಡಿಯೋಗೆ ಸಮಯ ನೀಡಲಾಗುವುದು. ಪರಿಸರ ಸಂರಕ್ಷಣೆಯ ಕಡೆಗೆ ನಮ್ಮ ಜವಾಬ್ದಾರಿಯನ್ನು ಎತ್ತಿಹಿಡಿಯುವುದರ ಜೊತೆಗೆ ಕನ್ನಡ ಮನರಂಜನಾ ಉದ್ಯಮವನ್ನು ಬೆಂಬಲಿಸಲು ನಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದ್ದರು.

ರಾತ್ರಿ  ಏನಾಗಿತ್ತು?

Bigg boss ಮನೆಯ ಹೊರಾಂಗಣ ಚಿತ್ರ

ರಾತ್ರಿ ಜಾಲಿವುಡ್ ಸ್ಟುಡಿಯೋ ಪ್ರತಿನಿಧಿಗಳು ಡಿಕೆಶಿಯನ್ನು ಭೇಟಿಯಾಗಿದ್ದಾರೆ. ಆ ನಂತರ ಬೆಂಗಳೂರು ದಕ್ಣಿಣ ಜಿಲ್ಲಾಧಿಕಾರಿಗೆ ಕರೆ ಮಾಡಿ ಡಿಕೆಶಿ ಸ್ಟೇಟಸ್ ರಿಪೋರ್ಟ್‌ ಪಡೆದಿದ್ದಾರೆ. ಈ ವೇಳೆ ಪಿಸಿಬಿ ಅಧ್ಯಕ್ಷ ನರೇಂದ್ರಸ್ವಾಮಿ ಜೊತೆಯೂ ಡಿಕೆಶಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕೋರ್ಟ್ ವಿಚಾರ ಕೋರ್ಟ್‌ನಲ್ಲೇ ನಡೆಯಲಿ. ಆದರೆ ಜಾಲಿವುಡ್ ಸಿಬ್ಬಂದಿಗೆ ನೋಟಿಸ್ ನೀಡಿದರೂ ಪ್ರತಿಕ್ರಿಯೆ ಕೊಡದಷ್ಟು ಉದ್ದಟತನ ತೋರಿದ್ದಾರೆ ಎಂದು ನರೇಂದ್ರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Karnataka | ರಾಜ್ಯದ ವಿವಿಧ ವಿಭಾಗದ ಪೊಲೀಸ್ ಪಿ.ಐ ಗಳ ವರ್ಗಾವಣೆ-ಎಲ್ಲಿ ಯಾರಿಗೆ ಯಾವ ಹುದ್ದೆ ವಿವರ ಇಲ್ಲಿದೆ.

ಇದಕ್ಕೆ, ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುತ್ತಾರೆ. ಬಿಗ್‌ಬಾಸ್‌ನಂತಹ ದೊಡ್ಡ ಕಾರ್ಯಕ್ರಮ ಅರ್ಧಕ್ಕೆ ನಿಲ್ಲುವುದು ಬೇಡ ಎಂದು ಡಿಕೆಶಿ ಮನವೊಲಿಕೆ ಮಾಡಿದ್ದಾರೆ. ಮನವೊಲಿಕೆಯ ಬೆನ್ನಲ್ಲೇ ನೀವೇ ತೀರ್ಮಾನ ಮಾಡಿ ಎಂದು ಡಿಕೆಶಿಗೆ ನರೇಂದ್ರ ಸ್ವಾಮಿ ಹೇಳಿದ್ದಾರೆ. ಕೊನೆಗೆ ಡಿಕೆಶಿ, ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಕರೆ ಮಾಡಿ ಜಾಲಿವುಡ್‌ ಸ್ಟುಡಿಯೋದಲ್ಲಿರುವ ಬಿಗ್‌ ಬಾಸ್‌ ಜಾಗವನ್ನು ಓಪನ್ ಮಾಡಲು ಸೂಚನೆ ನೀಡಿದ್ದಾರೆ. ಈ ಸೂಚನೆಯಂತೆ ಬಂದ್‌ ಆಗಿದ್ದ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳು ಮುಂಜಾನೆ ದೊಡ್ಮನೆ ಪ್ರವೇಶಿಸಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ