For the best experience, open
https://m.kannadavani.news
on your mobile browser.
Advertisement

Karnataka 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಂದ ಚಾಲನೆ

Karnataka/Mandya:- 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದೆ.
02:08 PM Dec 20, 2024 IST | ಶುಭಸಾಗರ್
karnataka 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಂದ ಚಾಲನೆ

Karnataka/Mandya:- 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದೆ.

Advertisement

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ (mandya) ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.

ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ.ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.

ಇದನ್ನೂ ಓದಿ:-Karnataka:ಬೋರ್‌ವೆಲ್‌ ಹಾಕಿಸಿದವರಿಗೆ ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ ,ಏನದು ವಿವರ ಇಲ್ಲಿದೆ.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ