ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Chitradurga| PSI ನಿಂದ BJP ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ -ನಡೆದುದ್ದೇನು?

ಚಿತ್ರದುರ್ಗ: ತಡರಾತ್ರಿ ರಸ್ತೆಯಲ್ಲಿ ಗುಂಪಾಗಿ ನಿಂತಿದ್ದನ್ನು ಪ್ರಶ್ನಿಸಿದ ಪಿಎಸ್‌ಐ (PSI) ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ಪ್ರತಿದೂರುಗಳು ದಾಖಲಾದ ಘಟನೆ ಚಿತ್ರದುರ್ಗದ (Chitradurga) ಖಾಸಗಿ ಹೋಟೇಲ್ ಬಳಿ ನಡೆದಿದೆ.
09:39 PM Mar 15, 2025 IST | ಶುಭಸಾಗರ್

Chitradurga| PSI ನಿಂದ BJP ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ -ನಡೆದುದ್ದೇನು?

Advertisement

ಚಿತ್ರದುರ್ಗ: ತಡರಾತ್ರಿ ರಸ್ತೆಯಲ್ಲಿ ಗುಂಪಾಗಿ ನಿಂತಿದ್ದನ್ನು ಪ್ರಶ್ನಿಸಿದ ಪಿಎಸ್‌ಐ (PSI) ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ಪ್ರತಿದೂರುಗಳು ದಾಖಲಾದ ಘಟನೆ ಚಿತ್ರದುರ್ಗದ (Chitradurga) ಖಾಸಗಿ ಹೋಟೇಲ್ ಬಳಿ ನಡೆದಿದೆ.

ಚಿತ್ರದುರ್ಗದ ತುರುವನೂರು (Turuvanur) ರಸ್ತೆಯಲ್ಲಿ ಮಧುಗಿರಿ (Madhugiri) ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ & ಟೀಂ ತಡರಾತ್ರಿಯಲ್ಲಿ ನಿಂತಿದ್ದರು. ಆಗ ಅಲ್ಲಿಗೆ ಆಗಮಿಸಿದ PSI  ರಸ್ತೆಯಲ್ಲಿ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:-Karnataka Budget 2025 -ಉತ್ತರ ಕನ್ನಡಕ್ಕೆ ಸಿಕ್ಕಿದ್ದೇನು?

Advertisement

ಈ ವೇಳೆ ನಗರಠಾಣೆ ಪಿಎಸ್‌ಐ ಗಾದಿಲಿಂಗಪ್ಪ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಅಲ್ಲದೇ ಹಲ್ಲೆ ವೇಳೆ ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈಬೆರಳಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:-Karnataka :ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧದ ಎರಡನೇ ಅತ್ಯಾ**ರ ಪ್ರಕರಣ ರದ್ದುಪಡಿಸಿದ  ಕೋರ್ಟ

ಹೀಗಾಗಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ಪೊಲೀಸರಿಂದಲೇ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಹನುಮಂತೇಗೌಡ ಪ್ರತ್ಯಾರೋಪ ಮಾಡಿದ್ದಾರೆ. ಈ ಬಗ್ಗೆ ಪ್ರತ್ಯಕ್ಷದರ್ಶಿಯಾದ ಹನುಮಂತೇಗೌಡರ ಕಾರಿನ ಚಾಲಕ ರಂಗಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

 ಊಟ ಮುಗಿಸಿ ಹೊರಡುವ ವೇಳೆ ಸ್ಥಳಕ್ಕೆ ಧಾವಿಸಿದ ಪೊಲೀಸರು ನಮ್ಮ ಸಾಹೇಬರನ್ನು ಏಕವಚನ ಹಾಗೂ ಅವಾಚ್ಯ ಶಬ್ದದಿಂದ ನಿಂದಿಸಿದರು. ಆಗ ಪಿಎಸ್‌ಐಗೆ ನಮ್ಮ ಸಾಹೇಬರು ಕೂಡ ನಿಂದಿಸಿದ್ದು, ಪರಸ್ಪರ ಹಲ್ಲೆ ನಡೆಸಿದ ಪರಿಣಾಮ ಘಟನೆ ನಡೆಯಿತೆಂದು ತಿಳಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಡಿಯೋ ಶೇರ್ ಮಾಡಿ ಖಂಡಿಸಿದ್ದಾರೆ.

ವಿಡಿಯೋ ಇಲ್ಲಿದೆ'-

Advertisement
Advertisement
Next Article
Advertisement