ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Court news | ಪೋಕ್ಸೋ ಪ್ಎಕರಣ ಯಡಿಯೂರಪ್ಪನವರಿಗೆ ಬಿಗ್ ರಿಲೀಫ್ | ಏನಾಯ್ತು ಪ್ರಕರಣ ವಿವರ ಇಲ್ಲಿದೆ.

Cour news:-Former Karnataka CM B.S. Yediyurappa gets major relief from the Supreme Court in the POCSO case. The CJI-led bench
02:03 PM Dec 02, 2025 IST | ಶುಭಸಾಗರ್
Cour news:-Former Karnataka CM B.S. Yediyurappa gets major relief from the Supreme Court in the POCSO case. The CJI-led bench

Court news | ಪೋಕ್ಸೋ ಪ್ಎಕರಣ ಯಡಿಯೂರಪ್ಪನವರಿಗೆ ಬಿಗ್ ರಿಲೀಫ್ | ಏನಾಯ್ತು ಪ್ರಕರಣ ವಿವರ ಇಲ್ಲಿದೆ.

Advertisement

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ (POCSCO) ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ (Supreme Court) ಬಿಗ್‌ ರಿಲೀಫ್‌ ಸಿಕ್ಕಿದೆ.

ಮೊನ್ನೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಿಚಾರಣೆಗೆ ತಡೆ ನೀಡಿದೆ.

Karnataka| ಮಾಜಿ ಸಿ.ಎಂ ಯಡಿಯೂರಪ್ಪರಿಗೆ ಬಿಗ್ ಶಾಕ್ ಕೊಟ್ಟ ಕೋರ್ಟ| ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೆ ಲಾಕ್! ?

Advertisement

ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್‌ ಲೂತ್ರಾ ಅವರು ಹೈಕೋರ್ಟ್‌ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದಿಸಿದರು. ವಾದ ಆಲಿಸಿದ ಸುಪ್ರೀಂ ವಿಚಾರಣೆಗೆ ತಡೆ ನೀಡಿ ಸಿಐಡಿಗೆ (CID) ನೋಟಿಸ್‌ ಜಾರಿ ಮಾಡಿದೆ.

ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ (Highcourt) ಮೆಟ್ಟಿಲೇರಿದ್ದರು.

Karnataka| ಕುರ್ಚಿಗಾಗಿ ಏಳೆಂಟು ಜನರ ಪೈಪೋಟಿ,ಶಾಸಕ,ಮಂತ್ರಿಗಳೂ ರೇಸ್ ನಲ್ಲಿ! ವಿಜಯೇಂದ್ರ ಏನಂದ್ರು ಗೊತ್ತಾ?

 ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು.

ಪ್ರಕರಣದ ಆರೋಪಿಗಳಾದ ಬಿ.ಎಸ್‌.ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಅವರಿಗೆ ಸಮನ್ಸ್‌ ಜಾರಿಗೊಳಿಸಿದ್ದ ವಿಶೇಷ ಸೆಷನ್ಸ್‌ ನ್ಯಾಯಾಲಯವು ಇಂದು (ಡಿ.2) ಕೋರ್ಟ್‌ಗೆ ಖುದ್ದು ಹಾಜರಾಗುವಂತೆ ಆದೇಶಿಸಿತ್ತು.

ಯಾವ ಪ್ರಕರಣ? ವಿವರ ಏನು?

ಬೆಂಗಳೂರಿನ (bangalur)ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ.

 ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿದೂರು ನೀಡಿದ್ದರು.

ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಾಕ್ಷ್ಯ ನಾಶಪಡಿಸಿದ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪಗಳ ಮೇಲೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಜೂನ್ 2024ರಲ್ಲಿ ಸಿಐಡಿ 750 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು.

ಈ ಪ್ರಕರಣದಲ್ಲಿ ದೂರು ನೀಡಿದ್ದ ಬಾಲಕಿಯ ತಾಯಿ ಮತ್ತು ಆ ಬಾಲಕಿ ಇಬ್ಬರೂ ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ. ಬಾಲಕಿಯ ತಾಯಿ ಮೇ 26, 2024ರಂದು ನಿಧನರಾದರು. ಆದರೇ ಈ ಪ್ರಕರಣ ಮುಂದುವರೆದ್ದು ಕೋರ್ಟ ನಲ್ಲಿದೆ.

Advertisement
Tags :
BSY Supreme Courtcourt NewsKarnataka Court UpdatesKarnataka politicspocso caseShivamoggaSupreme Court IndiaYediyurappa News
Advertisement
Next Article
Advertisement