Delhi Election Results 2025: AAP ಯಲ್ಲಿ ಸೋಲು ,ಗೆಲವು ಕಂಡ ನಾಯಕರಿವರು!
Delhi Election Results 2025: AAP ಯಲ್ಲಿ ಸೋಲು ,ಗೆಲವು ಕಂಡ ನಾಯಕರಿವರು!

Delhi Election Results 2025:- ದೆಹಲಿಯಲ್ಲಿ ನಡೆದ ಚುನಾವಣೆ ಫಲಿತಾಂಶ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದ್ರೆ ತನ್ನ ಶಕ್ತಿ ಸಾಮರ್ಥ್ಯವನ್ನೆಲ್ಲಾ ಪಣಕ್ಕಿಟ್ಟ AAP ಪಕ್ಷದಲ್ಲಿ ಘಟಾನು ಘಟಿ ನಾಯಕರೇ ಮುಗ್ಗರಿಸಿದ್ದಾರೆ.ಹಾಗಿದ್ರೆ ಯಾರು ಈ ನಾಯಕರು ಅಂತ ನೀವು ಕೇಳ್ತೀರ ಇಲ್ಲಿದೆ ನೋಡಿ ಅವರ ಸೋಲು ,ಗೆಲುವಿನ ಮಾಹಿತಿ.
ಸಿ.ಎಂ ಅತಿಶಿ ಗೆಲುವು !

ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಂಡ AAP ನಾಯಕಿ ಅತಿಶಿ ದೆಹಲಿಯ ಕಲ್ಕಾಜಿ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ .
ಕಲ್ಕಾಜಿ ಕ್ಷೇತ್ರವು ಯಾರ ಪಾಲಾಗಲಿದೆ ಎಂಬುದು ಕೊನೆ ವರೆಗಿನ ಕುತೂಹಲವಾಗಿತ್ತು. ಮತ ಎಣಿಕೆಯಲ್ಲಿ ಬಿಜೆಪಿ - ಎಎಪಿ ನಡುವೆ ಹಾವು ಏಣಿಯಾಟ ನಡೆದಿತ್ತು.ಆರಂಭದಲ್ಲಿ ದೆಹಲಿ ಸಿಎಂ ಅತಿಶಿ ಹಿನ್ನಡೆ ಅನುಭವಿಸಿದ್ದರು.
2020ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಅತಿಶಿ ಗೆದ್ದಿದ್ದರು. 2025 ರ ಬಿಜೆಪಿಯ ರಮೇಶ್ ಬಿಧುರಿ ಹಾಗೂ ಕಾಂಗ್ರೆಸ್‌ನ ಅಲ್ಕಾ ಲಂಬಾ ವಿರುದ್ಧ ಕಣಕ್ಕಿಳಿದಿದ್ದರು. ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದರು.

ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಯ ಭರ್ಜರಿ ಗೆಲುವು ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಉನ್ನತ ನಾಯಕರ ಆಘಾತಕಾರಿ ಸೋಲುಗಳ ಹೊರತಾಗಿಯೂ ಮುಖ್ಯಮಂತ್ರಿ ಅತಿಶಿ ದಕ್ಷಿಣ ದೆಹಲಿಯ ಕಲ್ಕಾಜಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಜೈಲು ಸೇರಿದಾಗ, ಸರ್ಕಾರವನ್ನು ಅತಿಶಿ ಮುನ್ನಡೆಸಿದ್ದರು. ಕೇಜ್ರಿವಾಲ್ ಜೈಲಿಂದ ಹೊರಬಂದಾಗ, ನಾಯಕಿ ಅತಿಶಿ ಅವರು ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಡಿಸಿಎಂ ಮನೀಶ್ ಸಿಸೋಡಿಯಾ ಸೋಲು.

18 ಳಾತೆಗಳನ್ನ ನಿಭಾಯಿಸಿದ್ದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ಹೀನಾಯ ಸೋಲು ಅಭವಿಸಿದ್ದಾರೆ.
ಜಂಗ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಸೋಡಿಯಾ ವಿರುದ್ಧ ಬಿಜೆಪಿ ಅಭ್ಯರ್ಥಿ ತರ್ವೀಂದರ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಕೇವಲ 636 ಮತಗಳ ಅಂತರದಿಂದ ಎಎಪಿ ಹಿರಿಯ ನಾಯಕ ಮುಖಭಂಗ ಅನುಭವಿಸಿದ್ದಾರೆ
ಜಂಗ್‌ಪುರ ಕ್ಷೇತ್ರದಲ್ಲಿ ಸಿಂಗ್ ಸಮುದಾಯ ಪ್ರಾಬಲ್ಯ ಹೊಂದಿದೆ. ಅದೇ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬಿಜೆಪಿ ರೂಪಿಸಿದ್ದ ತಂತ್ರಗಾರಿಕೆ ಕೆಲಸ ಮಾಡಿದೆ. ಮೊದಲ ಸ್ಪರ್ಧೆಯಲ್ಲೇ ತರ್ವೀಂದರ್ ಸಿಂಗ್ ಭರ್ಜರಿ ಗೆಲವು ಕಂಡಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮನೀಶ್ ಸಿಸೋಡಿಯಾ ಜೈಲು ಪಾಲಾಗಿದ್ದರು. ಹಲವು ತಿಂಗಳು ಜೈಲಲ್ಲಿ ಕಳೆದು ನಂತರ ರಿಲೀಸ್ ಆಗಿದ್ದರು. ದೆಹಲಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಸುಧಾರಣೆಗಳನ್ನು ತಂದ ಶ್ರೇಯ ಸಿಸೋಡಿಯಾಗೆ ಸಲ್ಲುತ್ತದೆ. ಆದರೆ, ನಂತರ ಸರ್ಕಾರದ ವಿರುದ್ಧ ಕೇಳಿಬಂದ ಹಗರಣಗಳ ಆರೋಪವು ಎಎಪಿ ಗೆ ಕಪ್ಪುಚುಕ್ಕೆಯಾಗಿದೆ.
ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಗೃಹ, ಹಣಕಾಸು, ಶಿಕ್ಷಣ, ಆರೋಗ್ಯ, ಲೋಕೋಪಯೋಗಿ ಇಲಾಖೆ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸೇರಿದಂತೆ 18 ಪ್ರಮುಖ ಖಾತೆಗಳನ್ನು ಸಿಸೋಡಿಯಾ ನಿರ್ವಹಿಸುತ್ತಿದ್ದರು. ಸರ್ಕಾರವನ್ನು ತಮ್ಮ ಹೆಗಲ ಮೇಲೆ ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು. ಕೇಜ್ರಿವಾಲ್ ಅವರ ಅತ್ಯಂತ ವಿಶ್ವಾಸಾರ್ಹ ಸಹಾಯಕ ಆಗಿದ್ದರು.
ಅರವಿಂದ್ ಕೇಜಿವಾಲ್ ಗೆ ಸೋಲು.

ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಾಹಿಬ್ ಸಿಂಗ್ ವಿರುದ್ಧ ಸೋಲು ಕಂಡಿದ್ದಾರೆ. ಈ ಮೂಲಕ ಸತತ 3ನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗುವ ಕನಸು ನುಚ್ಚುನೂರಾಗಿದೆ.
ಕಳೆದ 2 ಚುನಾವಣೆಗಳಲ್ಲಿ ನವದೆಹಲಿ ಕ್ಷೇತ್ರದಿಂದಲೇ ಸ್ಪರ್ಧಿಸಿ ಗೆದ್ದು ಸತತ 2 ಬಾರಿ ಸಿಎಂ ಆಗಿದ್ದರು. 3ನೇ ಬಾರಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಪರ್ವೇಶ್ ವಿರುದ್ಧ 3,000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಮದ್ಯ ನೀತಿ ಹಗರಣದಲ್ಲಿ ಭ್ರಷ್ಟಾಚಾರಾ ಆರೋಪದ ಮೇಲೆ ಜೈಲು ಸೇರಿದ ಕೇಜ್ರಿವಾಲ್ ರಾಜೀನಾಮೆ ಕೊಡಲು ಹಿಂದೇಟು ಹಾಕಿದರು. ಈ ವೇಳೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿ ಹಲವು ನಾಯಕರು ಜೈಲುಪಾಲಾದರು. ಇನ್ನೇನು ಆಪ್ ಬಹುತೇಕ ನಾಮಾವಶೇಷವಾಯ್ತು ಅನ್ನೋ ಹೊತ್ತಿಗೆ ಜೈಲಿನಿಂದ ಕೇಜ್ರಿವಾಲ್ ಬಿಡುಗಡೆಯಾದರು. ಜೈಲಿನಿಂದ ಹೊರ ಬಂದ ಬಳಿಕ ಮತ್ತೆ ಜನಾದೇಶ ಪಡೆದು ಆಯ್ಕೆಯಾದ ಬಳಿಕವೇ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ಶಪಥಗೈದಿದ್ದರು.
ಇದನ್ನೂ ಓದಿ:-Karnataka Government: ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಸಾವು : ತನಿಖೆಗೆ ಸಮಿತಿ ರಚಿಸಿದ ಸರ್ಕಾರ
ಈ ನಡುವೆ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ದೌರ್ಜನ್ಯ ಪ್ರಕರಣ ಸಹ ಸಂಕಷ್ಟ ತಂದೊಡ್ಡಿತು. ಪ್ರತಿ ಹಂತದಲ್ಲೂ ಲೆಪ್ಟಿನೆಂಟ್ ಗರ್ವನರ್ ಜೊತೆಗೆ ಸಂಘರ್ಷ ನಡೆಯುತ್ತಲೇ ಇತ್ತು. ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಶೀಷ್ ಮಹಲ್ ಆರೋಪ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು. ಖುದ್ದು ಪ್ರಧಾನಿ ಮೋದಿ ಅವರೇ ಶೀಷ್‌ಮಹಲ್ ನವೀಕರಣಕ್ಕೆ ಕೋಟ್ಯಂತರ ರೂಪಾಯಿ ಅಕ್ರಮ ಮಾಡಿರುವುದಾಗಿ ಆರೋಪಿಸಿದ್ದರು.
ಹೀಗೆ ಆಪ್ ಸಂಚಾಲಕ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸಾಲು ಸಾಲು ಸವಾಲು ಎದುರಿಸಬೇಕಾಯ್ತು. ಕೊನೆಗೆ ಜನರಿಂದ ಮಾನ್ಯತೆ ಪಡೆಯದೇ ಮತ್ತೆ ಸಿಎಂ ಕುರ್ಚಿ ಮೇಲೆ ಕೂರಲ್ಲ ಎಂದು ಶಪಥ ಮಾಡಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಇದೀಗ ಈ ಹೋರಾಟದಲ್ಲಿ ಕೇಜ್ರಿವಾಲ್ ಸೋಲು ಕಂಡಿದ್ದಾರೆ.