Darshan bail case| ನಟ ದರ್ಶನ್ ,ಪವಿತ್ರಾ ಗೌಡಾಗೆ ಜಾಮೀನು ನಿರಾಕರಣೆ.
ಬೆಂಗಳೂರು :-ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ
ಎ2 ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ಅರ್ಜಿ ವಜಾ ಗೊಂಡಿದೆ.
ದರ್ಶನ್ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ನಲ್ಲಿ ನಡೆಯಿತು. 120ಕ್ಕೂ ಅಧಿಕ ದಿನಗಳ ಕಾಲ ಜೈಲಿನಲ್ಲಿದ್ದ ದರ್ಶನ್ ಇಂದು (ಅ.14) ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ನ್ಯಾಯಾಲಯವು ಬೇಲ್ ನಿರಾಕರಿಸಿದೆ. ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ಗೆ ಜಾಮೀನು ಸಿಗದ ಕಾರಣ ಜೈಲೇ ಗತಿಯಾಗಿದೆ.
ಇದನ್ನೂ ಓದಿ:-Karnataka| ಮೊಬೈಲ್ ನಲ್ಲಿ ಪೊಲೀಸರಿಗೆ ದೂರು ನೀಡುವುದು ಹೇಗೆ? ವಿವರ ಇಲ್ಲಿದೆ.
ಇನ್ನು ಪವಿತ್ರ ಗೌಡ ಅವರ ಜಾಮೀನು ಅರ್ಜಿ ಸಹ ವಜಾ ಆಗಿದೆ. ಇಂದು (ಅ.14) 57ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿದೆ. 120ಕ್ಕೂ ಹೆಚ್ಚು ದಿನಗಳ ಕಾಲ ಜೈಲಿನಲ್ಲಿ ಕಾಲ ಕಳೆದಿರುವ ಪವಿತ್ರಾ ಗೌಡ ಅವರ ಜೈಲು ವಾಸ ಮುಂದುವರಿಯಲಿದೆ.
ಕೇಸ್ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆದ ಬಳಿಕ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅವರ ವಿಚಾರಣೆ ನಡೆದಿದ್ದು, ಇಂದು (ಅ.14) ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿದೆ. ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಹಾಗಾಗಿ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುವುದು ಅನಿವಾರ್ಯ ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಚಾರ್ಜ್ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು.
ಇದನ್ನೂ ಓದಿ:-Actor Darshan ಗೆ ಐಟಿಸಂಕಷ್ಟ- ಜೈಲಲ್ಲೇ ನಡೆಯಲಿದೆ ವಿಚಾರಣೆ!
ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಜಾಮೀನು ಕೊಡಲು ನಿರಾಕರಿಸಿದೆ. ಇದರಿಂದ ದರ್ಶನ್ ಬಳ್ಳಾರಿ ಜೈಲಿನಲ್ಲೇ ಮುಂದುವರಿಯುವುದು ಅನಿವಾರ್ಯ ಆಗಿದೆ.
ಇಬ್ಬರೂ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.