Former CM ಎಸ್ ಎಂ ಕೃಷ್ಣ ವಿಧಿವಶ – ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಕ್ರಿಯೆ
Bngalore 10 December 2024 :- ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರೂ ಆಗಿದ್ದ ಎಸ್.ಎಂ ಕೃಷ್ಣ ರವರು (SM Krishna) ಇಂದು ಸದಾಶಿವನಗರದ ಸ್ವಗೃಹದಲ್ಲಿ ಬೆಳಗಿನ ಜಾವ 2:30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.
ಅಮೆರಿಕ ಮಾಜಿ ಅಧ್ಯಕ್ಷ ಜಾನ್ ಎಫ್ ಕೆನಡಿ ಪ್ರೇರಣೆಯಿಂದ ರಾಜಕೀಯ ಸೇರಿದ್ದ ಎಸ್.ಎಂ ಕೃಷ್ಣ.
ಹೌದು ಅಮೆರಿಕ ಮಾಜಿ ಅಧ್ಯಕ್ಷ ಜಾನ್ ಎಫ್ ಕೆನಡಿ ಪ್ರೇರಣೆಯಿಂದ ಎಸ್ .ಎಂ ಕೃಷ್ಣಾ ರವರು ರಾಜಕೀಯ ಸೇರಿದ್ದರು.
1950 ರಂದು ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ಪದವಿ ಪಡೆದ ನಂತರ 1955 ರಲ್ಲಿ ಬೆಂಗಳೂರಿನ ಲಾ ಕಾಲೇಜಿನಲ್ಲಿ ಕೃಷ್ಣ ಬಿ.ಎಲ್ ಪದವಿ ಪಡೆದರು.
ಕೆಲವು ಕಾಲ ಹೆಸರಾಂತ ವಕೀಲರಾದ ಗಣೇಶರಾಯರ ಬಳಿ ಜೂನಿಯರ್ ಆಗಿ ಸೇರಿದ್ದರು.
1958 ರಲ್ಲಿ ಉನ್ನತ ವ್ಯಾಸಂಗಕ್ಕೆ ಕೃಷ್ಣ ಅವರು ಅಮೆರಿಕಗೆ ತೆರಳುತ್ತಾರೆ. ಅಲ್ಲಿನ ಟೆಕ್ಸಾಸ್‌ನ ಡಲ್ಲಾಸ್ ನಗರದ ಸದರನ್ ಮೆಥಾಡಿಸ್ಟ್ ವಿವಿಯಲ್ಲಿ ಎಂ.ಸಿ.ಎಲ್ ಪದವಿ ಪಡೆಯುತ್ತಾರೆ. ನಂತರ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪಿಹೆಚ್‌ಡಿಗೆ ಸೇರಿದರೂ ಅವರು ಪೂರ್ಣಗೊಳಿಸುವುದಿಲ್ಲ.
ಇದನ್ನೂ ಓದಿ:-Weather : ರಾಜ್ಯದ ಹಲವು ಭಾಗದಲ್ಲಿ ಮಳೆ ಇಂದು ಹೇಗಿರಲಿದೆ ವಾತಾವರಣ
ಸಂದರ್ಭದಲ್ಲಿ ಜಾನ್.ಎಫ್.ಕೆನಡಿ ಅವರ ಪ್ರಭಾವಕ್ಕೆ ಎಸ್.ಎಂ ಕೃಷ್ಣ ಒಳಗಾಗುತ್ತಾರೆ. 1960 ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಯುವ ರಾಜಕಾರಣಿ ಕೆನಡಿ ಸ್ಪರ್ಧಿಸಿದ್ದ ವೇಳೆ ಅವರ ಪರ SM ಕೃಷ್ಣ ಅವರು ಪ್ರಚಾರ ನಡೆಸಿದ್ದರು. ಚುನಾವಣೆಯಲ್ಲಿ ಜಯಗಳಿಸಿದ ನಂತರ ಕನಡಿ ಅವರು ಎಸ್‌ಎಂ ಕೃಷ್ಣ (sm krisna) ಅವರಿಗೆ ಧನ್ಯವಾದ ಪತ್ರ ಸಹ ಬರೆದಿದ್ದರು.
1961 ರಂದು ಕೃಷ್ಣ ಅವರು ಅಮೆರಿಕದಿಂದ ಉನ್ನತ ವ್ಯಾಸಂಗ ಮುಗಿಸಿ ಭಾರತಕ್ಕೆ ಮರಳಿದರು. ಬಂದವರೇ 1962ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಸ್ಪರ್ಧಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ್ದರು. ಹಲವಾರು ಬಾರಿ ಎಂಸ್‌ಎಂಕೆ ಕೆನಡಿ ತನ್ನ ರಾಜಕೀಯ ಗುರು ಎಂದು ಹೇಳಿಕೊಂಡಿದ್ದರು.
ನಟಿ ರಮ್ಯಾ (Ramya) ಅವರು ಸದಾಶಿವನಗರ ಆಗಮಿಸಿ ಎಸ್‌ಎಂ ಕೃಷ್ಣ (SM Krishna) ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಎಸ್. ಎಂ ಕೃಷ್ಣ ರವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಇದಲ್ಲದೇ ಪ್ರಧಾನಿ ನರೇಂದ್ರ ಮೋದಿ (pm narendra modi ) , ಮಾಜಿ ಪ್ರಧಾನಿ ದೇವೇಗೌಡ,ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದರು.