Goa |ಗೋವಾ ಕ್ಲಬ್ ನಲ್ಲಿ ಬೆಂಕಿ ಅವಘಡ 23 ಜನ ಸಜೀವ ದಹನ
Goa |ಗೋವಾ ಕ್ಲಬ್ ನಲ್ಲಿ ಬೆಂಕಿ ಅವಘಡ 23 ಜನ ಸಜೀವ ದಹನ .
ಪಣಜಿ: ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ ಅಗ್ನಿ ದುರಂತ (Goa Club Fire) ಸಂಭವಿಸಿದ್ದು, 23 ಜನ ಸಾವಿಗೀಡಾಗಿದ್ದಾರೆ. ಇದರಲ್ಲಿ ಮೂರು ಜನ ಮಹಿಳೆಯರು ಸೇರಿದ್ದಾರೆ.
ಫೇಮಸ್ ನೈಟ್‌ಕ್ಲಬ್ ಬಿರ್ಚ್‌ನಲ್ಲಿ (Birch Nightclub)ಈ ಘಟನೆ ನಡೆದಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗೋವಾ ವೈದ್ಯಕೀಯ ಕಾಲೇಜು (Goa Medical College) ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Goa| ಗೋವಾ -ಮಾಜಾಳಿ ಗಡಿಯಲ್ಲಿ ತಪಾಸಣೆ ವೇಳೆ ಸಿಕ್ಕಿಬಿತ್ತು ಕೋಟಿ ಹಣ ! ಇಬ್ಬರು ಪೊಲೀಸರ ವಶಕ್ಕೆ!
ಪ್ರಾಥಮಿಕ ವರದಿಗಳ ಪ್ರಕಾರ, 3-4 ಮಂದಿ ಮಾತ್ರ ಪ್ರವಾಸಿಗರಾಗಿದ್ದರು (Tourists), ಉಳಿದ 19 ಮಂದಿ ಕ್ಲಬ್‌ನ ಸಿಬ್ಬಂದಿಯೇ ಆಗಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸರು, ತಡರಾತ್ರಿ 1 ಗಂಟೆ ಸುಮಾರಿಗೆ ಕ್ಲಬ್ ಮುಚ್ಚಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದರು ಅಷ್ಟರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕೆಯಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಕೆನ್ನಾಲಿಗೆ ಚಾಚಿಕೊಂಡಿದೆ. ಕ್ಲಬ್‌ನ ಒಳಗಿದ್ದವರಿಗೆ ತಪ್ಪಿಸಿಕೊಳ್ಳಲು ಸಮಯಾವಕಾಶವಿತ್ತು. ಆದಾಗ್ಯೂ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕು ಎಂದು ತಿಳಿಸಿದ್ದಾರೆ.
ಇನ್ನು ಪ್ರಧಾನಿ ಮೋದಿ ಸಹ ಈ ಘಟನೆ ಕುರಿತು ಗೋವಾ ಮುಖ್ಯಮಂತ್ರಿ ಜೊತೆ ಮಾಹಿತಿ ಪಡೆದು ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಕ್ಕೆ ಎರಡು ಲಕ್ಷ ಹಾಗೂ ಗಾಯಾಳುಗಳಿಗೆ ಐವತ್ತು ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ.
ಇನ್ನು ಮೃತಪಟ್ಟವರು ಯಾರು ಎಂಬ ಬಗ್ಗೆ ಮಾಹಿತಿ ದೊರತೆತಿಲ್ಲ. ಮೃತರಾದವರು ಇಲ್ಲಿಯವರೋ ಅಥವಾ ಬೇರೆ ರಾಜ್ಯದವರೋ ಎಂಬುದು ತಿಳಿದು ಬರಬೇಕಿದೆ.