HASSAN| ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಮಹಿಳೆ - ಬಂಧನ
HASSAN| ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಮಹಿಳೆ - ಬಂಧನ
ವಿಡಿಯೋ ನೋಡಿ:-
ಹಾಸನ: ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ (Ganesha Idol) ಮಹಿಳೆಯೋರ್ಬಳು ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ (Hassan) ಜಿಲ್ಲೆ, ಬೇಲೂರು (Belur) ಪಟ್ಟಣದಲ್ಲಿ ನಡೆದಿದೆ.
ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್ಯ ಪೂಜೆ ಕೈಂಕರ್ಯಗಳು ನಡೆಯುತ್ತದೆ. ಪ್ರತಿನಿತ್ಯ ವ್ಯಾಪಾರಿಗಳು ಬೆಳಗ್ಗೆ ಗಣೇಶಮೂರ್ತಿಗೆ ಕೈಮುಗಿದು ವ್ಯಾಪಾರ ಆರಂಭಿಸುತ್ತಾರೆ. ಶನಿವಾರ ರಾತ್ರಿ ಪುರಸಭೆ ಗೇಟ್‌ಗೆ ಬೀಗ ಹಾಕಿಕೊಂಡು ತೆರಳಿದ್ದರು. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.
Karnataka| ಪುಟ್ಟ ಮಗುವನ್ನ ಮಹಡಿ ಮೇಲಿಂದ ತಳ್ಳಿ ಹ*** ಮಾಡಿದ ಮಲತಾಯಿ ಮೂರು ದಿನದ ನಂತರ ಸತ್ಯ ಬಯಲು.
ನಂತರ ಪ್ರಕರಣ ದಾಖಲಾಗಿದ್ದು ಸಿಸಿ ಟಿವಿ ವಿಡಿಯೋ ಗಮನಿಸಿದಾಗ ಮಹಿಳೆಯೋರ್ವಳು ಚಪ್ಪಲಿ ಹಾರ ಹಾಕಿ ಹೋಗಿರುವುದು ಪತ್ತೆಯಾಗಿದೆ. ಇದೀಗ ಹಾಸನ ಪೊಲೀಸರು ಶಂಕಿತ ಮಹಿಳೆಯೋರ್ವಳನ್ನು ಬಂಧಿಸಿದ್ದು ತನಿಖೆ ಕೈಗೊಂಡಿದ್ದಾರೆ.