Rain news| ಅಬ್ಬರದ ಗಾಳಿ ಮಳೆ,ಮುಳುಗಿದ ರಸ್ತೆ ,ಕುಸಿದ ಗುಡ್ಡ ಎಲ್ಲಿ ಏನಾಯ್ತು ವಿವರ ಇಲ್ಲಿದೆ.
Rain news| ಅಬ್ಬರದ ಗಾಳಿ ಮಳೆ,ಮುಳುಗಿದ ರಸ್ತೆ ,ಕುಸಿದ ಗುಡ್ಡ ಎಲ್ಲಿ ಏನಾಯ್ತು ವಿವರ ಇಲ್ಲಿದೆ.
Rain news (25 october 2025) :- ದೇಶದ ಕರಾವಳಿ ಭಾಗದಲ್ಲಿ ಅಬ್ಬರದ ಮಳೆ(rain) ಸುರಿಯುತ್ತಿದೆ. ಗಾಳಿ ,ಮಳೆಯ ಆರ್ಭಟಕ್ಕೆ ಕರ್ನಾಟಕ ಕರಾವಳಿ ಹಾಗೂ ಗೋವಾ ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ.
ರಾಜ್ಯದಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ. ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡ ದಲ್ಲಿ ಕಳೆದ 24 ಗಂಟೆಯಲ್ಲಿ 80 ಮಿ.ಮೀ, ಬೇಲಿಕೇರಿ -76 ಮಿ.ಮೀ. ,ಕುಮಟಾ 72.8 ಮಿ.
ಮೀ ಮಳೆಯಾಗಿದೆ. ರಾಜ್ಯದಲ್ಲಿ ರಾಯಚೂರು ,ದಕ್ಷಿಣ ಕನ್ನಡ,ವಿಜಯಪುರ ,ಗದಗ ದಲ್ಲಿ ಹೆಚ್ಚಿನ ಮಳೆ ವರದಿಯಾಗಿದೆ.
Uttara kannada| ಉತ್ತರ ಕನ್ನಡ C.S.R ಫಂಡ್ ಗಳು ಸರ್ಕಾರಿ ಕಚೇರಿ ಅಭಿವೃದ್ಧಿಗೆ ಮಾತ್ರ ಸೀಮಿತ!
ಉತ್ತರ ಕನ್ನಡ ಜಿಲ್ಲೆಯ ಅಂಕೋಲ,ಕುಮಟಾ,ಕಾರವಾರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು ಕಾರವಾರದಲ್ಲಿ ಇಂದು ಬೆಳಗ್ಗೆ ಸುರಿದ ಮಳೆಗೆ ನಗರದ ರೈಲ್ವೆ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ನೀರುನಿಂತು ಸವಾರರಿಗೆ ಸಮಸ್ಯೆ ತಂದೊಡ್ಡಿತು.
ಎಲ್ಲಿ ಎಷ್ಟು ಮಳೆಯಾಗಿದೆ(rain) ವಿವರ ಇಲ್ಲಿದೆ.

ಇನ್ನು ಕಾರವಾರದ ನೆರೆಯ ಗೋವಾ ರಾಜ್ಯದಲ್ಲೂ ಅಬ್ಬರದ ಗಾಳಿ-ಮಳೆ ಸುರಿದಿದ್ದು ಗೋವಾದ ತಲೆಯಗಾವ್ ನ ಡಾ.ಶಾಮಪ್ರಸಾದ್ ಮುಖರ್ಜಿ ಸ್ಟೇಡಿಯಮ್ ನ ಮುಖ್ಯ ದ್ವಾರದ ಕಮಾನು ಕುಸಿದು ಬಿದ್ದು ಸಂಪೂರ್ಣ ಹಾನಿಯಾಗಿದೆ. ಇದಲ್ಲದೇ ಪಣಜಿ ನಗರದ ಹೈಕೋರ್ಟ ಸಮೀಪ ಇರುವ ಗುಡ್ಡ ಕುಸಿದು ಮನೆಗಳಿಗೆ ಹಾನಿ ಸಂಭವಿಸಿದೆ. ಇದಲ್ಲದೇ ಗಾಳಿಯ ಪ್ರಮಾಣ ಹೆಚ್ಚಾಗಿ ಮಳೆ ಆರ್ಭಟವೂ ಹೆಚ್ಚಾಗಿದ್ದು , ಕೆಲವು ಸಮಯ ಕಾರವಾರ-ಗೋವಾ ಹೆದ್ದಾರಿಯಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು.

ಇನ್ನು ಕರ್ನಾಟಕ,ಗೋವಾ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನ ಅಬ್ಬರದ ಮಳೆ ಸುರಿಯುವ ಎಚ್ಚರಿಕೆ ನೀಡಿದೆ.

And for orders more than 2499 rs 15% discount ( for Deepavali)
We also take birthday parties and family get together etc also

