IMD Weather Forecast: ಒಂದು ವಾರಗಳ ಕಾಲ ಮಳೆ ಅಲರ್ಟ
IMD Weather Forecast: ಒಂದು ವಾರಗಳ ಕಾಲ ಮಳೆ ಅಲರ್ಟ
IMD Weather Forecast: ಚಂಡಮಾರುತ ಪರಿಣಾಮ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆಯ (rain)ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5-6 ದಿನಗಳ ಕಾಲ ರಾಜ್ಯ ಹಾಗೂ ದೇಶದ ಹಲವು ಭಾಗದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 22ರವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಗಂಟೆಗೆ ಗಾಳಿ 40ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಕರ್ನಾಟಕದ (karnataka)ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ, ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ,ಶಿವಮೊಗ್ಗ,ಉಡುಪಿ,ಮಂಗಳೂರಿನಲ್ಲಿ ಸಹ ಅಲ್ಲಲ್ಲಿ ಮಳೆಯಾಗಲಿದೆ.
ರಾಜ್ಯದ ಎಲ್ಲೆಲ್ಲಿ ಎಷ್ಟು ದಿನ ಮಳೆ ವಿವರ ಈ ಕೆಳಗಿದೆ.



IMD ರವರ ಮಾಹಿತಿಯಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕೆಲವೇ ಕೆಲವೆಡೇ ಮಾತ್ರ ತಾಪಮಾನ ಪ್ರಮಾಣದಲ್ಲಿ ಏರಿಕೆ ಆಗಲಿದೆ ಎಂದು ತಿಳಿಸಿದೆ.
ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ಗೋವಾ ಮತ್ತು ಕೇರಳ ತಮಿಳುನಾಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮೇ 20-22ರವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ಮೇ 19-20ರ ವರೆಗೆ ರಾಯಲಸೀಮಾ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ ಮೇ 19ರಿಂದ 24ರ ವರೆಗೆ ಕೇರಳ, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕ, ಮೇ 22ರ ವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದೇಶದ ರಾಜದಾನಿ ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಇಲ್ಲಿನ ಇನ್ನೂ ಕೆಲವು ಭಾಗಗಳಲ್ಲಿ ಮಾತ್ರ ಗಂಟೆಗೆ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ದೆಹಲಿಯಲ್ಲಿ ಗರಿಷ್ಠ ತಾಪಮಾನ 38-40 °C, ಕನಿಷ್ಠ ತಾಪಮಾನವು 27-29 °C ವರೆಗೂ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ:-Karnataka: ಕರಾವಳಿ ಬಂದರಿನಿಂದ ಹೊರಟ ಸರಕು ಸಾಗಾಟ ಹಡಗು ಮುಳುಗಡೆ- 6 ಜನರ ರಕ್ಷಣೆ
ಮುಂದಿನ 5-6 ದಿನಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ ಈ ಭಾಗಗಳಲ್ಲಿ ಗಂಟೆಗೆ 30-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಮೇ 19ರಂದು ತ್ರಿಪುರ ಮತ್ತು ನಾಗಾಲ್ಯಾಂಡ್, 24ರವರೆಗೆ ಅಸ್ಸಾಂ ಮತ್ತು ಮೇಘಾಲಯ, ಮೇ 20ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮೇ 19 ಮತ್ತು 20ರಂದು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಈ ಎರಡು ದಿನ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಉತ್ತರಾಖಂಡದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಈ ರಾಜ್ಯಗಳಲ್ಲಿ ತಪಮಾನ ಹೆಚ್ಚಳ.
ಮೇ 19ರಿಂದ ಮೇ 22ರ ವರೆಗೆ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಟ್ಟಿನಲ್ಲಿ ರಾಜ್ಯ ಹಾಗೂ ದೇಶದ ಹಲವು ಭಾಗದಲ್ಲಿ ಒಂದು ವಾರಗಳ ಕಾಲ ಮಳೆ ಬೀಳುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.