Former Prime Minister ಮನಮೋಹನ್ ಸಿಂಗ್ ವಿಧಿವಶ
ನವದೆಹಲಿ: ಮಾಜಿ ಪ್ರಧಾನಿ ಹಾಗೂ ಈ ದೇಶ ಡ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ (AIMS Hospital) ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:-Karnataka ಹೊಸ ಪ್ರಬೇಧದ ಪರಾವಲಂಬಿ ಕಣಜ ಪತ್ತೆ
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು.
ಯುಪಿಎಯ (UPA) ಎರಡು ಅವಧಿಯ ಪ್ರಧಾನಿಯಾಗಿ ಅವರು 2004 ಮತ್ತು 2014 ರಲ್ಲಿ ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್‌ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಮನಮೋಹನ್ ಸಿಂಗ್ ರವರದ್ದು.