For the best experience, open
https://m.kannadavani.news
on your mobile browser.
Advertisement

India:ಭಾರತ-ಪಾಕಿಸ್ತಾನ ಕದಮ ವಿರಾಮ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan Conflict) ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ (S.Jaishankar) ಸ್ಪಷ್ಟಪಡಿಸಿದ್ದಾರೆ
07:46 PM May 10, 2025 IST | ಶುಭಸಾಗರ್
ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan Conflict) ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ (S.Jaishankar) ಸ್ಪಷ್ಟಪಡಿಸಿದ್ದಾರೆ
india ಭಾರತ ಪಾಕಿಸ್ತಾನ ಕದಮ ವಿರಾಮ

India:ಭಾರತ-ಪಾಕಿಸ್ತಾನ ಕದಮ ವಿರಾಮ

Advertisement

ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan Conflict) ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ (S.Jaishankar) ಸ್ಪಷ್ಟಪಡಿಸಿದ್ದಾರೆ

ಈ ಕುರಿತು ಎಕ್ಸ್‌ನಲ್ಲಿ ಸಚಿವ ಮಾಹಿತಿ ಹಂಚಿಕೊಂಡಿದ್ದಾರೆ. ‘ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ಹೊಂದಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:-Karnataka:  ವಿದೇಶಾಂಗ ಇಲಾಖೆ ಸೂಚನೆ ಇದ್ರೂ ಭಟ್ಕಳ ಪಾಕಿಸ್ತಾನದ ಪ್ರಜೆಗಳು ಭಟ್ಕಳದಲ್ಲಿ! ಏನಿದು ವಿಶೇಷ ಸೂಚನೆ?

ಭಾರತ ಮತ್ತು ಪಾಕ್‌ ತ್ವರಿತ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒತ್ತಾಯಿಸಿದ್ದರು. ಅಮೆರಿಕ ಮಧ್ಯಸ್ಥಿಕೆಯೊಂದಿಗೆ ಕೊನೆಗೂ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.

ಉಭಯ ದೇಶಗಳ ನಡುವೆ ಕದನ ವಿರಾಮ ಒಪ್ಪಂದ ಆಗಿದೆ ಎಂದು ಡೊನಾಲ್ಡ್‌ ಟ್ರಂಪ್‌ ಎಕ್ಸ್‌ ಪೋಸ್ಟ್‌ ಮೂಲಕ ತಿಳಿಸಿದ್ದರು. ಅದರ ಬೆನ್ನಲ್ಲೇ ಎರಡೂ ದೇಶಗಳು ಅಧಿಕೃತವಾಗಿ ಕದನ ವಿರಾಮದ ಬಗ್ಗೆ ತಿಳಿಸಿವೆ.

ಇಂದು ಸಂಜೆ 5 ಗಂಟೆಯದಲೇ ಕದನ ವಿರಾಮ.

ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ. ಮೇ 12ರಂದು ಉಭಯ ದೇಶಗಳು ಮಾತುಕತೆ ನಿರ್ಧರಿಸಿವೆ. ಈ ಸಭೆಗೆ ಅಮೆರಿಕಾ(America) ಮಧ್ಯಸ್ಥಿಕೆ ವಹಿಸಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಭಾರತದ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಡುತ್ತಿದ್ದಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌(Donald Trump) ಉಭಯ ರಾಷ್ಟ್ರಗಳಿಗೆ ಕದನ ವಿರಾಮ(Ceasefire) ಮಾಡುವಂತೆ ಸಲಹೆ ನೀಡಿದ್ದರು. ಆದರೆ ಇದು ಫಲಪ್ರದವಾಗಿರಲಿಲ್ಲ. ಇದೀಗ ಮತ್ತೊಮ್ಮೆ ಮಾತುಕತೆ ನಡೆಸಿ, ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ.

ಪ್ರಕೃತಿ ಮೆಡಿಕಲ್ ,ಕಾರವಾರ.
Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ