For the best experience, open
https://m.kannadavani.news
on your mobile browser.
Advertisement

Karavali| ನೌಕಾದಳದ ಮಾಹಿತಿ ಪಾಕಿಸ್ತಾನಕ್ಕೆ ರವಾನೆ| ಇಬ್ಬರ ಬಂಧನ

Two employees working at Cochin Shipyard in Malpe, Udupi, have been arrested for illegally sharing confidential Indian Navy ship details and secret information with Pakistan via WhatsApp. Police registered a case under the Official Secrets Act and national security charges, and the court has remanded the accused to judicial custody till December 3, 2025.
02:07 PM Nov 21, 2025 IST | ಶುಭಸಾಗರ್
Two employees working at Cochin Shipyard in Malpe, Udupi, have been arrested for illegally sharing confidential Indian Navy ship details and secret information with Pakistan via WhatsApp. Police registered a case under the Official Secrets Act and national security charges, and the court has remanded the accused to judicial custody till December 3, 2025.
karavali  ನೌಕಾದಳದ ಮಾಹಿತಿ ಪಾಕಿಸ್ತಾನಕ್ಕೆ ರವಾನೆ  ಇಬ್ಬರ ಬಂಧನ

Karavali| ನೌಕಾದಳದ ಮಾಹಿತಿ ಪಾಕಿಸ್ತಾನಕ್ಕೆ ರವಾನೆ| ಇಬ್ಬರ ಬಂಧನ

Advertisement

ಉಡುಪಿ: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಪಾಕಿಸ್ತಾನಕ್ಕೆ ಶೇರ್ ಮಾಡಿ, ಅಕ್ರಮ ಲಾಭಪಡೆದಿರುವ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ (udupi ) ಜಿಲ್ಲೆಯ ಮಲ್ಪೆಯ ಕೊಚ್ಚಿನ್ ಶಿಪ್ಯಾರ್ಡ್ ಕಂಪೆನಿಯಲ್ಲಿ ನೌಕರಿ ಮಾಡುತ್ತಿದ್ದ ಇಬ್ಬರು ಪಾಕಿಸ್ಥಾನಕ್ಕೆ ಗೌಪ್ಯ ಮಾಹಿತಿ ರವಾನಿಸಿದ ಆರೋಪ ಎದುರಿಸುತ್ತಿದ್ದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದ ರೋಹಿತ್ (29) ಮತ್ತು ಸಂತ್ರಿ (37) ಬಂಧಿತರು.

Karnataka|ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿಳಿಮಲೆ.

ಮಲ್ಪೆಯ ಕೊಚ್ಚಿನ್ ಶಿಪ್ಯಾರ್ಡ್ ಕಂಪೆನಿ ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಧೀನದಲ್ಲಿದೆ. ಈ ಸಂಸ್ಥೆಯಿಂದ M/S Shushma Marine Private Limited ಎಂಬ ಸಂಸ್ಥೆಯ ಸಬ್‌ಕಂಟ್ರಾಕ್ಟ್ ಹೊಂದಿದ್ದು, ಈ ಸಂಸ್ಥೆಯಲ್ಲಿ ಉತ್ತರಪ್ರದೇಶ ರಾಜ್ಯದ ರೋಹಿತ್ ಎಂಬಾತ ಇನ್ಸುಲೇಟರ್ ಆಗಿ ಕೆಲಸ ಮಾಡಿಕೊಂಡಿದ್ದ. ಈತ ಈ ಹಿಂದೆ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಕೇರಳದ ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿ ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

Karnataka Navy day ದೀಪಾಲಂಕಾರ ಗೊಂಡ ನೌಕೆಗಳು ಹೇಗಿತ್ತು ಗೊತ್ತಾ | ವಿಡಿಯೋ ನೋಡಿ

ರೋಹಿತ್, ಕೇರಳದಲ್ಲಿ ಕೆಲಸ ಮಾಡುವಾಗ ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್ ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿದ್ದಾನೆ.

ನಂತರ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ಗೆ ವರ್ಗಾವಣೆ ಆದ ನಂತರವೂ ಆತನ ಕೊಚ್ಚಿಯಲ್ಲಿರುವ ಆತನ ಸ್ನೇಹಿತನಿಂದ ಮಾಹಿತಿ ಪಡೆದು, ಪುನಃ ವಾಟ್ಸಪ್ ಮೂಲಕ ಪಾಕಿಸ್ತಾನದ ಅನಧಿಕೃತ ವ್ಯಕ್ತಿಗೆ ಶೇರ್ ಮಾಡಿ, ಭಾರತದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಗೆ ಅಪಾಯವನ್ನುಂಟು ಮಾಡಿದ್ದಾನೆ. ಮತ್ತು ಆಂತರಿಕ ಭದ್ರತೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾನೆ. ಈ ಬಗ್ಗೆ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಮಲ್ಪೆಯ ಸಿಇಓ ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ : 128/2025, ಕಲಂ:152 BNS, ಕಲಂ:3,5 OFFICIAL SECRETS ACT, 192303 ថថ ದಾಖಲಿಸಿಕೊಳ್ಳಲಾಗಿದೆ.

Karwar |ಮನೆ ಕಳ್ಳತನಕ್ಕೆ ಬಂದ ಕಳ್ಳರನ್ನ ನೋಡಿ ಬೊಗಳಿದ ಶ್ವಾನ- ಕಳ್ಳರನ್ನು ಹಿಡಿದ ಗ್ರಾಮದ ಜನ

ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳಾದ ರೋಹಿತ್ (29) ಮತ್ತು ಸಂತ್ರಿ(37) ಎಂಬಿಬ್ಬರನ್ನು ಬಂಧಿಸಿದ್ದಾರೆ. ಇಬ್ಬರೂ ಉತ್ತರ ಪ್ರದೇಶ ಮೂಲದವರಾಗಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ 03/12/2025ರವರೆಗೆ ನ್ಯಾಯಾಂಗ ಬಂದನಕ್ಕೆ ನೀಡಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ