For the best experience, open
https://m.kannadavani.news
on your mobile browser.
Advertisement

Karnataka ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹನಿಟ್ರಾಪ್ | ವಿಜೆಯೇಂದ್ರ ಭೇಟಿಗೆ ಸಮಯ ಕೇಳಿದ ಸಂತ್ರಸ್ತೆ!

ಬೆಂಗಳೂರು: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ( former chief minister )ಹನಿಟ್ರ್ಯಾಪ್( honey trap) ಮಾಡಿದ್ದಾರೆ.
06:05 PM Oct 09, 2024 IST | ಶುಭಸಾಗರ್
karnataka ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹನಿಟ್ರಾಪ್   ವಿಜೆಯೇಂದ್ರ ಭೇಟಿಗೆ ಸಮಯ ಕೇಳಿದ ಸಂತ್ರಸ್ತೆ

ಬೆಂಗಳೂರು: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ( former chief minister )ಹನಿಟ್ರ್ಯಾಪ್( honey trap) ಮಾಡಿದ್ದಾರೆ.

Advertisement

ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುವುದಾಗಿ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆಂದು ಹೇಳಲಾದ ಸಂತ್ರಸ್ತ ಮಹಿಳೆ ಹೇಳಿದ್ದಾರೆ.

ಇದನ್ನೂ ಓದಿ:- Karnataka| ಹವಾಮಾನ ವರದಿ- 08-10-2024

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸತ್ರ ಮಹಿಳೆ ಮುನಿರತ್ನ ಮಾಜಿ ಸಿಎಂ ಇಬ್ಬರಿಗೆ ಹನಿಟ್ರ್ಯಾಪ್‌ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ಹೇಳಿದ್ದಾರೆ.

ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಇಬ್ಬರು ಮಾಜಿ ಸಿಎಂ, ಸಚಿವರು, ಶಾಸಕರು ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ.

ಇದನ್ನೂ ಓದಿ:-Karwar |ಮಂಗಳಮುಖಿಯಂತೆ ನಟಿಸಿ ಭಿಕ್ಷಾಟನೆ ಮಾಡುತಿದ್ದ ಯುವತಿಯ ಗ್ಯಾಂಗ್ !

ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ನನ್ನ ಹಾಗೂ ಮುನಿರತ್ನ ಬ್ರೈನ್ ಮ್ಯಾಪಿಂಗ್ ಮಾಡಿಸಲಿ ಎಂದು ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಮಾಜಿ ಸಚಿವ ಅಶೋಕ್ ಗೆ ಸಂತ್ರಸ್ಥೆ ಚಾಲೆಂಜ್ ಮಾಡಿದ್ದಾರೆ.

ಹನಿಟ್ರ್ಯಾಪ್ ( honey trap) ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ, ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಇನ್ನು ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾದ ಸುಮಾರು ಐದಾರು ಸಂತ್ರಸ್ತ ಮಹಿಳೆಯರು ಹೆದರಿಕೊಂಡು ಸುಮ್ಮನಾಗಿದ್ದಾರೆ.

ಅವರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು. ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ವಿಜಯೇಂದ್ರ 10 ನಿಮಿಷ ಅಪಾಯಿಂಟ್ ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ ಎಂದರು.

ಇಷ್ಟೆಲ್ಲ ಆದ್ರೂ ಮುನಿರತ್ನ ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲ ಎಂದು ಕೇಳಬೇಕಿದೆ ಎಂದು ಹೇಳಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ