For the best experience, open
https://m.kannadavani.news
on your mobile browser.
Advertisement

Agriculture | ಕೃಷಿ ಆಸಕ್ತರಿಗೊಂದು ಅವಕಾಶ ಈಗಲೇ ಅರ್ಜಿ ಸಲ್ಲಿಸಿ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜು ಬ್ರಹ್ಮಾವರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ಗೆ ಭರ್ತಿಯಾಗದೆ ಖಾಲಿ ಉಳಿದಿರುವ ಸೀಟುಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
07:59 AM Oct 20, 2024 IST | ಶುಭಸಾಗರ್
agriculture   ಕೃಷಿ ಆಸಕ್ತರಿಗೊಂದು ಅವಕಾಶ ಈಗಲೇ ಅರ್ಜಿ ಸಲ್ಲಿಸಿ

ಅ.25 ರಂದು ಡಿಪ್ಲೊಮಾ ಕೃಷಿ ಕೋರ್ಸ್ಗೆ ಮುಕ್ತ ಕೌನ್ಸಿಲಿಂಗ್

Agriculture information 20 October:   ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜು ಬ್ರಹ್ಮಾವರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ಗೆ ಭರ್ತಿಯಾಗದೆ ಖಾಲಿ ಉಳಿದಿರುವ ಸೀಟುಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

Advertisement

ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.

ಪ್ರವೇಶ ಅರ್ಹತೆ :

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯನ್ನು ಅಭ್ಯಸಿಸಿ ಕನಿಷ್ಠ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

(ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊAದಿಗೆ ಉತ್ತೀರ್ಣರಾಗಿರಬೇಕು) ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.

ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ : www.uahs.edu.in ಪಡೆದು ಭರ್ತಿಮಾಡಿದ ಅರ್ಜಿಗಳನ್ನು, ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ ಮುಕ್ತ ಕೌನ್ಸಿಲಿಂಗ್ ದಿನ ತರುವುದು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್ (Nationalized Bank) .. Comptroller, KSNUAHS, Shivamogga – 577 412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಅ.25 ರಂದು ಖುದ್ದಾಗಿ, ಎಂಪಿ ಹಾಲ್, ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಇಲ್ಲಿಗೆ ಬೆಳಗ್ಗೆ 10.30 ಕ್ಕೆ ಸಲ್ಲಿಸಬೇಕು. ನಿಗದಿತ ಸಮಯದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರವೇಶ ಮತ್ತು ಆಯ್ಕೆ ವಿಧಾನ:

ಸರ್ಕಾರದ ಆದೇಶಗಳ ಅನ್ವಯ ಉಳಿದಿರುವ ಸೀಟುಗಳನ್ನು ಮುಕ್ತ ಕೌನ್ಸಿಲಿಂಗ್ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳು ರೂ. 6,190/- ಪ್ರವೇಶ ಶುಲ್ಕವನ್ನು ನಗದಾಗಿ ಸ್ಥಳದಲ್ಲಿಯೇ ಕಡ್ಡಾಯವಾಗಿ ಪಾವತಿಸಬೇಕಾಗಿರುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಪೋಷಕರ ಆದಾಯ ರೂ. 2.5 ಲಕ್ಷದೂಳಗಿದ್ದರೆ ಅಂತಹ ಅಭ್ಯರ್ಥಿಗಳು ರೂ. 2,610/- ಪ್ರವೇಶ ಶುಲ್ಕವನ್ನು ನಗದಾಗಿ ಸ್ಥಳದಲ್ಲಿಯೇ ಕಡ್ಡಾಯವಾಗಿ ಪಾವತಿಸಬೇಕಾಗಿರುತ್ತದೆ.

ಇದನ್ನೂ ಓದಿ:-CENTRAL GOVERNMENT | ಆರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ-ವಿವರ ನೋಡಿ

ಹೆಚ್ಚಿನ ವಿವರಗಳಿಗೆ ,ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಮತ್ತು ಕಾಲೇಜು ಮತ್ತು ವಿಳಾಸ ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ - 576213, ಉಡುಪಿ ಜಿಲ್ಲೆ ಪ್ರಾಂಶುಪಾಲರು: 9480838208, ಕಛೇರಿ : 9108241342, 9686405090 ಇ-ಮೇಲ್ princi-brahmavar@uahs.edu.inವೆಬ್‌ಸೈಟ್ www.uahs.edu.in ವೆಬ್‌ಸೈಟ್‌ನ್ನು ಸಂಪರ್ಕಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿಕರಿಗೊಂದು ಅವಕಾಶ ಜೇನುಗಾರಿಕೆ ತರಬೇತಿ.

Jenu  krushi news kanndavani

Uttra kannda ತೋಟಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ಸಿದ್ದಾಪುರ ತಾಲೂಕಿನ ಬೀಳಗಿ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ನ.5 ರಿಂದ 4 ಫೆಬ್ರವರಿ 2025 ರವರೆಗೆ ರೈತ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ:-ರೈತರಿಗೊಂದು ಮಾಹಿತಿ| ಬೆಳೆ ಸರ್ವೆ ಮಾಡಿಸದಿದ್ದರೇ ಕೈತಪ್ಪಲಿದೆ ಸವಲತ್ತುಗಳು!

ಆಸಕ್ತರು ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ), ಶಿರಸಿ(sirsi) ಅಥವಾ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ), ಕಾರವಾರ ರವರ ಕಛೇರಿಯಲ್ಲಿ ಅಥವಾ https://horticulturedir.karnataka.gov.in ಮೂಲಕ ಅ.21 ರಿಂದ ಅ.25 ರೊಳಗಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಶಿರಸಿಯ ತೋಟಗಾರಿಕೆ ಉಪನಿರ್ದೇಶಕರ ಕಛೇರಿಗೆ ಅ.28 ರೊಳಗಾಗಿ ಸಲ್ಲಿಸಬೇಕು.

ಉತ್ತರ ಕನ್ನಡ ಜಿಲ್ಲೆಯ ಪ.ಜಾತಿಯ 1 ಅಭ್ಯರ್ಥಿ ಹಾಗೂ ಇತರೆ ವರ್ಗದ 2 ಅಭ್ಯರ್ಥಿಗಳನ್ನು ನಿಯಮಾನುಸಾರ ತರಬೇತಿಗೆ ಆಯ್ಕೆ ಮಾಡಲಾಗುವುದು, ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವಂತೆ ಶಿರಸಿಯ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ