ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Bidadi : ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ! 

Ramnagar :- ರಾಮನಗರ(Ramnagar) ಜಿಲ್ಲೆಯ ಬಿಡದಿಯ ರೈಲ್ವೆ ನಿಲ್ದಾಣಕ್ಕೆ (railway station )ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಂಟ್ರೋಲ್ ರೂಂಗೆ ಕರೆಮಾಡಿ ಬೆದರಿಕೆ ಹಾಕಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
01:08 PM Mar 25, 2025 IST | ಶುಭಸಾಗರ್

Bidadi : ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ! 

Advertisement

Ramnagar :- ರಾಮನಗರ(Ramnagar) ಜಿಲ್ಲೆಯ ಬಿಡದಿಯ ರೈಲ್ವೆ ನಿಲ್ದಾಣಕ್ಕೆ (railway station )ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಂಟ್ರೋಲ್ ರೂಂಗೆ ಕರೆಮಾಡಿ ಬೆದರಿಕೆ ಹಾಕಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

 ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕಿಡಿಗೇಡಿಯೋರ್ವ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಹಿನ್ನೆಲೆ ಇಂದು ಬೆಳಿಗ್ಗೆಯೇ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಹಾಗೂ ಪೊಲೀಸರ ನೇತೃತ್ವದಲ್ಲಿ ತೀವ್ರ ಶೋಧ ನಡೆಸಲಾಗಿದೆ.

ಇದನ್ನೂ ಓದಿ:-Karnataka :ಗುಲಾಮನೊಬ್ಬ ದೈವವಾದ ಕತೆ: ಈತನಿಗೆ ಮದ್ಯ,ಸಿಗರೇಟೇ ನೈವೇದ್ಯ! 

Advertisement

ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದಲ್ಲಿ ಬಿಡದಿ ರೈಲ್ವೆ ನಿಲ್ದಾಣದ ಸುತ್ತಮುತ್ತ ಪರಿಶೀಲನೆ ಮಾಡಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಇನ್ನೂ ಹುಸಿ ಬಾಂಬ್ ಬೆದರಿಕೆ ಹಾಕಿರುವ ಅಪರಿಚಿತ ವ್ಯಕ್ತಿ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಅಲ್ಲದೇ ರೈಲ್ವೆ  ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಮೇಲೂ ನಿಗಾ ಇರಿಸಲಾಗಿದ್ದು, ತೀವ್ರ ತಪಾಸಣೆ ನಡೆಸಲಾಗಿದ್ದು ಸಧ್ಯ ಬಾಂಬ್ ಇಟ್ಟಿರುವುದು ಹುಸಿಯಾದ್ದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

Advertisement
Tags :
Bangalurbomb threatbrakingKannda newsKarnatakaRailway stationಬೆಂಗಳೂರು
Advertisement
Next Article
Advertisement