2nd PUC Results 2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಇಲ್ಲಿದೆ ವಿವರ
2nd PUC Results 2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು, ಏಪ್ರಿಲ್ 08: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ಮಧ್ಯಾಹ್ನ 1:30 ಗಂಟೆಯ ನಂತರ ಫಲಿತಾಂಶ ವೀಕ್ಷಿಸಬಹುದಾಗಿದೆ.
ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 93.90ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎರಡನೇ ಸ್ಥಾನ ದಕ್ಷಿಣ ಕನ್ನಡ ಜಿಲ್ಲೆ ಪಡೆದಿದೆ. ಇನ್ನು 48.45ರಷ್ಟು ಫಲಿತಾಂಶ ಪಡೆಯುವ ಮೂಲಕ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಉತ್ತರ ಕನ್ನಡ ಆರನೇ ಸ್ಥಾನ ಪಡೆದಿದೆ.
ವಿಭಾಗವಾರು ಫಲಿತಾಂಶ ನೋಡುವುದಾದರೆ, ಕಲಾ ವಿಭಾಗದಲ್ಲಿ 53.29 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 76.07 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಾಗೂ ವಿಜ್ಞಾನ ವಿಭಾಗದಲ್ಲಿ 82.54 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
Rank ಪಡೆದವರ ಮಾಹಿತಿ ಇಲ್ಲಿದೆ:-
