Belagavi :ಬೆಳಗಾವಿಗೆ ಅಮೇರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ!
Report by -Ramya sarika
Belagavi news 05 November 2024: ಬೆಳಗಾವಿಯಲ್ಲಿ ನಡೆಯುವ ಅಧಿವೇಶನಕ್ಕೆ ಅಮೇರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಆಗಮಿಸಲಿದ್ದಾರೆ.
ಹೌದು ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ (HK Patel) ಸಿಎಂ ಸಿದ್ದರಾಮಯ್ಯನವರು (CM Siddaramaiah) ಈಗಾಗಲೇ ಬರಾಕ್ ಒಬಾಮಾ (Barack Obama) ಅವರನ್ನು ಆಹ್ವಾನಿಸಿ ಪತ್ರವನ್ನು ಬರೆದಿದ್ದಾರೆ.
ಇದನ್ನೂ ಓದಿ:-Bedar :ಐತಿಹಾಸಿಕ ತಾಣವೂ ವಕ್ಫ್ ಆಸ್ತಿ!
ಡಿಸೆಂಬರ್ 26, 27 ಅಥವಾ ಜನವರಿ 2025 ರಿಂದ ಅಕ್ಟೋಬರ್-2025ರೊಳಗಾಗಿ ದಿನಾಂಕ ನೀಡಲು ಕೋರಲಾಗಿದೆ.
ಬೆಳಗಾವಿಯಲ್ಲಿ ಜಂಟಿ ಅಧಿವೇಶನವನ್ನು ನಡೆಸಲಾಗುವುದು ಎಂದ ಅವರು ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು.
ಇದನ್ನೂ ಓದಿ:-Karwar ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿರುದ್ಧ ಸಟ್ಲಮಂಟ್ ಆರೋಪ ಮಾಡಿದ ಸಚಿವ ಮಂಕಾಳು ವೈದ್ಯ!
ಅಂತಾರಾಷ್ಟೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ. ಗಾಂಧೀಜಿಯ (Mahatma Gandhi) ಕುರಿತು ವಿಶೇಷ ಅಭಿಮಾನ ಹೊಂದಿರುವ ಒಬಾಮಾ ಅವರು ಜಂಟಿ ಅಧಿವೇಶನ ಉದ್ಧೇಶಿಸಿ ಮಾತನಾಡಬೇಕು ಎಂಬುದು ಎಲ್ಲರ ಆಶಯ ಎಂದರು.