Dasara| ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಪಿಐಎಲ್ ವಜಾ
Dasara| ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಪಿಐಎಲ್ ವಜಾ
ಬೆಂಗಳೂರು: ನಾಡಹಬ್ಬ ದಸರಾ (Dasara) ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ (High Court) ಸಲ್ಲಿಸಿದ್ದ ಪಿಐಎಲ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
Gokarna:ಅಹಮದಾಬಾದ್ ವಿಮಾನ ದುರಂತ -ಗೋಕರ್ಣದಲ್ಲಿ ಮೃತ 260 ಕ್ಕೂ ಹೆಚ್ಚು ಜನರ ಪಿತ್ರುಕಾರ್ಯ
ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha), ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಪಿಐಎಲ್ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ಹಾಗೂ ನ್ಯಾ. ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಬಳಿಕ ದಸರಾ ಉದ್ಛಾಟನೆಗೆ ಬಾನು ಮುಷ್ತಾಕ್ ಆಯ್ಕೆಯಿಂದ ಯಾವುದೇ ಹಕ್ಕು ಉಲ್ಲಂಘನೆಯಿಲ್ಲ ಎಂದು ಪಿಐಎಲ್ ಅರ್ಜಿಗಳನ್ನು ಪೀಠ ವಜಾಗೊಳಿಸಿತು
Mysore:ಸಚಿವ ಮಹಾದೇವಪ್ಪ ಹೆಸರಿನಲ್ಲಿ ವಂಚನೆ! ಬೀದಿಗಿಳಿದ ವಂಚಿತರು!
ಬಾನು ಮುಷ್ತಾಕ್ (Banu Mushtaq) ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹೈಕೋರ್ಟ್ ಮೆಟ್ಟಿಲೇರಿದ್ದರು.
ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದೆ. ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಆದರೂ ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡಿದ್ದಾರೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಮನವಿ ಮಾಡಿದ್ದರು.
ಆದರೇ ಇದೀಗ ಹೈಕೋರ್ಟ್‌ಗೆ (High Court) ಸಲ್ಲಿಸಿದ್ದ ಪಿಐಎಲ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

