Karnataka Government: ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಸಾವು : ತನಿಖೆಗೆ ಸಮಿತಿ ರಚಿಸಿದ ಸರ್ಕಾರ
Karnataka Government: ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಸಾವು : ತನಿಖೆಗೆ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು :- ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ದಿನದಿಂದ ದಿನಕ್ಕೆ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕೋವಿಡ್ (covid)ನಂತರ ಹಲವು ಯುವಕರು ಹೃದಯಾಘಾತ ( heart attack) ಮುಂದಾದ ವಿಷಯಗಳಿಂದ ಸಾವು ಕಾಣುತಿದ್ದು ಈಬಗ್ಗೆ ಅಧ್ಯಯನ ಸಹ ನಡೆಯಬೇಕಿದೆ.
ಈ ಕುರಿತು ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,(CM Siddaramaiah) ಕೊರೊನಾ (Carona) ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಸಾವಾಗುತ್ತಿದೆ. ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ.

ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು ಎಂದು ಹೇಳಿದ್ದಾರೆ.
ಇದನ್ನೂ ಓದಿ:-Karnataka ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ ಆನ್‌ಲೈನ್ ಅರ್ಜಿ ಸಲ್ಲಿಸೋದು ಹೇಗೆ? ಅರ್ಹರು ಯಾರು? ವಿವರ ನೋಡಿ
ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ. ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇದನ್ನೂ ಓದಿ:-Karnataka: ಆರಿಹೋದ 46 ವರ್ಷದಿಂದ ಎಣ್ಣೆ ,ಬತ್ತಿ ಇಲ್ಲದೇ ಉರಿಯುತಿದ್ದ ದೀಪ ಕರ್ನಾಟಕ್ಕೆ ಸಂಕಷ್ಟ ಕಾದಿದೆಯಾ?
ರಾಜಾರಾಂ ತಲ್ಲೂರು ರವರು ತಮ್ಮ ಇ-ಮೇಲ್ (E-Mail)ಮೂಲಕ ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿದ್ದು ಇದರ ಬಗ್ಗೆ ಅಧ್ಯಯನ ನಡೆಸಿ ಈ ಸಮಸ್ಯೆ ಯನ್ನು ಬಗೆಹರಿದಬೇಕು ಎಂದು ಅವರು ಹೇಳಿದ್ದರು.