ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karnataka: ರಾಜ್ಯಪಾಲರಿಂದ ಸಿಕ್ತು ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆಗೆ ಅಂಕಿತ

ಬೆಂಗಳೂರು ಫೆ.12:- ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಸುಗ್ರೀವಾಜ್ಞೆ ಜಾರಿ ಸಂಬಂಧ ಕೆಲವು ಲೋಪದೋಷ ಹಿನ್ನೆಲೆಯಲ್ಲಿ ಅಂಕಿತ ಹಾಕದೇ ರಾಜ್ಯಪಾಲರು ಮರಳಿ ಕಳುಹಿಸಿದ ಬೆನ್ನಲ್ಲೇ ಇದೀಗ ಲೋಪದೋಷ ಸರಿಪಡಿಸಿ ಕಳುಹಿಸಿದ್ದ ಸುಗ್ರೀವಾಜ್ಞೆ ಕಡತಕ್ಕೆ ರಾಜ್ಯಪಾಲರು ಸಹಿ ಹಾಕುವ ಮೂಲಕ ಜಾರಿಗೆ ಬರುತ್ತಿದೆ.
07:17 PM Feb 12, 2025 IST | ಶುಭಸಾಗರ್

Karnataka: ರಾಜ್ಯಪಾಲರಿಂದ ಸಿಕ್ತು ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆಗೆ ಅಂಕಿತ.

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಬೆಂಗಳೂರು ಫೆ.12:- ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಸುಗ್ರೀವಾಜ್ಞೆ ಜಾರಿ ಸಂಬಂಧ ಕೆಲವು ಲೋಪದೋಷ ಹಿನ್ನೆಲೆಯಲ್ಲಿ ಅಂಕಿತ ಹಾಕದೇ ರಾಜ್ಯಪಾಲರು ಮರಳಿ ಕಳುಹಿಸಿದ ಬೆನ್ನಲ್ಲೇ ಇದೀಗ ಲೋಪದೋಷ ಸರಿಪಡಿಸಿ ಕಳುಹಿಸಿದ್ದ ಸುಗ್ರೀವಾಜ್ಞೆ ಕಡತಕ್ಕೆ ರಾಜ್ಯಪಾಲರು ಸಹಿ ಹಾಕುವ ಮೂಲಕ ಜಾರಿಗೆ ಬರುತ್ತಿದೆ.

ಈ ಮೂಲಕ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಗೊಂಡತೆ ಆಗಿದೆ.

ಹಿಂದೆ ಏನಾಗಿತ್ತು?

Advertisement

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು.

ರಾಜ್ಯಪಾಲರು ಕೆಲವು ನ್ಯೂನ್ಯತೆ ಹಿನ್ನೆಲೆಯಲ್ಲಿ ಮಸೂದೆಯನ್ನು ವಾಪಾಸ್‌ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಿತ್ತು.

Astrology advertisement

ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟಿಕರಣ ಸಿದ್ದಪಡಿಸಲಾಗಿತ್ತು. ಈ ಸ್ಪಷ್ಟಿಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಮರು ರವಾನೆ ಮಾಡಲಾಗಿತ್ತು.

ಇದನ್ನೂ ಓದಿ:-Haliyala :ಸಾಲ ತೀರಿಸಿದರೂ ಕಾಲಿ ಚಕ್ ತೋರಿಸಿ ಮಂಚಕ್ಕೆ ಕರೆದ ಮೀಟರ್ ದಂಧೆಕೋರರ ಬಂಧನ.

ಇಂದು ರಾಜ್ಯ ಸರ್ಕಾರದಿಂದ ( state government) ಕಳುಹಿಸಿದ್ದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆ ತಡೆ ಕಾಯ್ದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅಂಕಿತ ಹಾಕಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆ ಜಾರಿಗೊಂಡಿದೆ.

Advertisement
Tags :
FinanceGovernorHarassmentKarnatakamicrofinanceOrdinanceRegulation
Advertisement
Next Article
Advertisement