For the best experience, open
https://m.kannadavani.news
on your mobile browser.
Advertisement

Karnataka:ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ SC/ST ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ

Bangalur 07 November 2024:IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದೆ.
06:59 PM Nov 07, 2024 IST | ಶುಭಸಾಗರ್
karnataka ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ sc st ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ

Bangalur 07 November 2024:IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ (student) ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದೆ.

Advertisement

ಈ ಕುರಿತು ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು(HC mahadevappa) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:-Karnataka: ಮನೆಗೆ ನುಗ್ಗಿ ಮಕ್ಕಳ ಅಪಹರಣ ಫೈರಿಂಗ್ ಮಾಡಿ ಮಕ್ಕಳ ರಕ್ಷಣೆ.

ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.

ಇದನ್ನೂ ಓದಿ:-Karnataka:ಶಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ | ರಾಘವೇಶ್ವರ ಶ್ರೀ ,ಕಲ್ಲಡ್ಕ ಪ್ರಭಾಕರ್ ಭಟ್ ಗೆ ಸರ್ಕಾರ ಕ್ಲೀನ್ ಚಿಟ್

ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು.

ಐಐಟಿ ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು ಎಂದು ಮಾನ್ಯ ಸಚಿವರು ತಿಳಿಸಿದರು.

ಇದನ್ನೂ ಓದಿ:-Arecanut Price: ಅಡಿಕೆ ಧಾರಣೆ 06 November 2024

ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್(MBBS) ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.

ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿರುತ್ತದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ