ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Muda Scam| ಸಿಎಂಗೆ ನಿರಾಸೆ – ತನಿಖೆ ಮುಂದುವರಿಸಿ,ಅಂತಿಮ ವರದಿ ಸಲ್ಲಿಕೆಗೆ ಆದೇಶ

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಬಿಗ್ ರಿಲೀಫ್ ನಿರೀಕ್ಷೆಯಲ್ಲಿದ್ದ ಸಿಎಂ ಸಿದ್ದರಾಮಯ್ಯಗೆ (Siddaramaiah) ಹಿನ್ನಡೆಯಾಗಿದೆ.
10:13 PM Apr 15, 2025 IST | ಶುಭಸಾಗರ್

Muda Scam| ಸಿಎಂಗೆ ನಿರಾಸೆ – ತನಿಖೆ ಮುಂದುವರಿಸಿ,ಅಂತಿಮ ವರದಿ ಸಲ್ಲಿಕೆಗೆ ಆದೇಶ

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಬಿಗ್ ರಿಲೀಫ್ ನಿರೀಕ್ಷೆಯಲ್ಲಿದ್ದ ಸಿಎಂ ಸಿದ್ದರಾಮಯ್ಯಗೆ (Siddaramaiah) ಹಿನ್ನಡೆಯಾಗಿದೆ.

Advertisement

ತನಿಖೆ ಮುಂದುವರಿಸಿ, ಅಂತಿಮ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (court) ಮಂಗಳವಾರ ಆದೇಶಿಸಿದೆ.

ಸಿದ್ದರಾಮಯ್ಯನವರ  ವಿರುದ್ಧದ ಬಿ ರಿಪೋರ್ಟ್ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಮತ್ತು ಇಡಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ, ಆದೇಶ ಕಾಯ್ದಿರಿಸಿದ್ದ ನ್ಯಾಯಾಲಯ ಅಂತಿಮ ವರದಿ ಬಳಿಕ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದೆ.

ಇದನ್ನೂ ಓದಿ:-MUDA Case| 14 ಸೈಟ್ ಮರಳಿಸುವುದಾಗಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಘೋಷಣೆ.

Advertisement

ತನಿಖೆ ಮುಂದುವರಿಸಲು ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಪುರಸ್ಕರಿಸಿದ್ದಾರೆ.

ಆದೇಶದ ಬಳಿಕ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾ ಅಧಿಕಾರಿಗಳು ಸಿಎಂ ಕುಟುಂಬವನ್ನ ರಕ್ಷಣೆ ಮಾಡುವುದಕ್ಕೆ ತನಿಖೆ ಪೂರ್ಣಗೊಳಿಸದೇ ವರದಿ ಸಲ್ಲಿಕೆ ಮಾಡಿದ್ದರು. ಹಾಗಾಗಿ ಕೋರ್ಟ್ ಅಂತಿಮ ವರದಿಯನ್ನ ಸಲ್ಲಿಸಲು ಕೋರ್ಟ್ ಸೂಚಿಸಿದೆ ಎಂದಿದ್ದಾರೆ.

ಇದನ್ನೂ ಓದಿ'-ಸಿದ್ದರಾಮಯ್ಯ ಸಮಾಜವಾದಿ ಅಲ್ಲ,ಮಜಾವಾದಿ-ಸಂಸದ ವಿಶ್ವೇಶ್ವರ ಹೆಗಡೆ

ತನಿಖಾಧಿಕಾರಿಗಳಿಗೆ ತನಿಖೆಯ ಬಗ್ಗೆ ತಿಳಿದಿಲ್ಲ. ಮಾನ್ಯ ನ್ಯಾಯಾಲಯದ ಇಂದಿನ ಆದೇಶದಲ್ಲಿ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಸಿಎಂ ಅಧಿಕಾರ ದುರುಪಯೋಗಪಡಿಸಿಕೊಂಡು ಕೇಸ್ ಮುಚ್ಚಿ ಹಾಕುವ ಪ್ರಯತ್ನಕ್ಕೆ ನಾನು ಅವಕಾಶ ಕೊಡಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಬಿಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಈ ಬಾರಿ ಸಿ.ಎಂ ಗೆ ವಿಫಲವಾಗಿದೆ.

Advertisement
Tags :
Cm KarnatakaCm siddaramaiahcontinues investigationordersKarnatakaKarnataka newsmuda scamNewsscam
Advertisement
Next Article
Advertisement