Karnataka Rain: ರಾಜ್ಯಾದ್ಯಂತ 7 ದಿನ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್
Karnataka Rain: ರಾಜ್ಯಾದ್ಯಂತ 7 ದಿನ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್
Rain news:- ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕಾಗಿರುವ ಕಾರಣ ಮುಂದಿನ 7 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ |ಕಳೆದ 24 ಗಂಟೆಯ ಮಳೆ ವಿವರ:-
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ
Karwar|ಊಟ ಮಾಡುವಾಗ ಗಂಟಲಲ್ಲಿ ಅನ್ನ ಸಿಲುಕಿ ಯುವಕ ಸಾವು
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.
ಮುಂಗಾರಿನ ಚಲನೆ ಹೇಗಿದೆ?
ಪಶ್ಚಿಮ ರಾಜಸ್ಥಾನದ ಕೆಲವು ಭಾಗಗಳಿಂದ ನೈರುತ್ಯ ಮಾನ್ಸೂನ್ ಇಂದು ಹಿಂದೆ ಸರಿದಿದೆ. ಮಹಾರಾಷ್ಟ್ರ ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯಿಂದ ಉತ್ತರ ಒಳನಾಡಿನ ಕರ್ನಾಟಕದಾದ್ಯಂತ ಸರಾಸರಿ ಸಮುದ್ರ ಮಟ್ಟಕ್ಕಿಂತ 3.1ರಿಂದ 4.5 ಕಿ.ಮೀ. ಎತ್ತರದಲ್ಲಿ ಚಲಿಸುತ್ತದೆ. ದಕ್ಷಿಣ ಒಳನಾಡಿನಿಂದ ತಮಿಳುನಾಡಿನಾದ್ಯಂತ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟಕ್ಕಿಂತ 0.9 ಕಿ.ಮೀ ಎತ್ತರದಲ್ಲಿ ತಗ್ಗು ಪ್ರದೇಶವು ಕಡಿಮೆಯಾಗಿದೆ.