For the best experience, open
https://m.kannadavani.news
on your mobile browser.
Advertisement

Karnataka Rain: ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಅಲರ್ಟ್‌

Rain news :- ಒಂದಡೆ ಚಳಿ ಹೆಚ್ಚಳದಿಂದ ಕರ್ನಾಟಕ (karnatka) ಕೂಲ್ ಕೂಲ್ ಮಂಜಿನ ವಾತಾವರಣ ಸೃಷ್ಟಿಯಾಗಿದೆ. ಇದೀಗ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಬೀಳುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
09:30 PM Dec 21, 2024 IST | ಶುಭಸಾಗರ್
karnataka rain  ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಅಲರ್ಟ್‌

Rain news :- ಒಂದಡೆ ಚಳಿ ಹೆಚ್ಚಳದಿಂದ ಕರ್ನಾಟಕ (karnatka) ಕೂಲ್ ಕೂಲ್ ಮಂಜಿನ ವಾತಾವರಣ ಸೃಷ್ಟಿಯಾಗಿದೆ. ಇದೀಗ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಬೀಳುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Advertisement

ಹಾಗಿದ್ರೆ ಯಾವ ಜಿಲ್ಲೆಯಲ್ಲಿ ಇನ್ನೆರೆಡು ದಿನದಲ್ಲಿ ಮಳೆಯಾಗಲಿದೆ, ಯಾವ ಜಿಲ್ಲೆಯಲ್ಲಿ ಒಣ ಹವೆ ಮುಂದುವರೆಯಲಿದೆ ಎಂಬ ಮಾಹಿತಿ ಇಲ್ಲಿದೆ.

ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಕ್ಕೆ ಕೇಂದ್ರೀಕೃತವಾಗಿದೆ. ಅದರ ನಂತರ ಇದು ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ.

ಹೀಗಾಗಿ ಮುಂದಿನ 24 ಗಂಟೆಗಳಲ್ಲಿ ಇದು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರಿ ಮಂಜು ಕವಿಯುವ ಸಾಧ್ಯತೆ ಇದೆ. ಈ ವೇಳೆ ಚಳಿಯ ಪ್ರಮಾಣ ಕೂಡ ತೀವ್ರಗೊಳ್ಳಲಿದೆ.

ಡಿಸೆಂಬರ್‌ 23ರಂದು ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (rain)ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದ ಮೇಲೆ ಒಣ ಹವೆ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:-Gokarna | ಸಾಣಿಕಟ್ಟಾ ಉಪ್ಪಿನ ಉತ್ಪಾದನ ಘಟಕಕ್ಕೆ ವಿಷ ಬೆರೆಸಿದ ಗೋದಾವರಿ ಹೋಟಲ್ ಕಿರಾತಕರು!

ಡಿಸೆಂಬರ್‌ 24ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದ್ದು ಚಳಿಯ ಪ್ರಮಾಣ ಹೆಚ್ಚಾಗಲಿದೆ.

ಡಿಸೆಂಬರ್‌ 25ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಹಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:-Karnataka ಹೊಸ ಪ್ರಬೇಧದ ಪರಾವಲಂಬಿ ಕಣಜ ಪತ್ತೆ

ಉತ್ತರ ಕನ್ನಡ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಡಿಸೆಂಬರ್‌ 26ರಂದು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಹಲವು ಪ್ರದೇಶದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ ಮತ್ತು ಆಂತರಿಕ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನವು ಚಾಲ್ತಿಯಲ್ಲಿರಲಿದ್ದು ಚಳಿ ಹೆಚ್ಚಿರಲಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ