ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karnataka Rains | ರಾಜ್ಯದ ಹಲವು ಕಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ 

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರ ಭಾರಿ ಮಳೆಯಾಗುವ (rain)ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
10:26 PM Apr 02, 2025 IST | ಶುಭಸಾಗರ್

Karnataka Rains | ರಾಜ್ಯದ ಹಲವು ಕಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ 

Advertisement

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರ ಭಾರಿ ಮಳೆಯಾಗುವ(Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.ಇದರ ಜೊತೆ ಒಂಬತ್ತು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಹಾಗೂ ಎಂಟು ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್‌' ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,(Dakshina kannda) ಉಡುಪಿ (Udupi) ಹಾಗೂ ಉತ್ತರ ಕನ್ನಡ (Uttara kannda) ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:-Karnataka :ಡೀಸೆಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರ 

Advertisement

ಬುಧವಾರ ಸಹ ಕಾರವಾರ ಸೇರಿದಂತೆ ಹಲವು ಭಾಗದಲ್ಲಿ ಅಲ್ಪ ಮಳೆಯಾಗಿದ್ದು ,ಇನ್ನೂ ನಾಲ್ಕು ದಿನ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದ‌ರ್ ಮತ್ತು ಗದಗ ಜಿಲ್ಲೆಯಲ್ಲಿ ಗಂಟೆಗೆ 50 ಕಿ.ಮೀನಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:-Karnataka : ಹಾಲಿನ ದರದ ಜೊತೆ ಮೊಸರಿನ ದರ ಹೆಚ್ಚಳ – ಈಗೆಷ್ಟು ದರ ವಿವರ ನೋಡಿ

ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಮತ್ತು ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಪ್ರಕೃತಿ ಮೆಡಿಕಲ್ ,ಕಾರವಾರ.

 ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರದ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಶುಕ್ರವಾರವು ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಶನಿವಾರ ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯಿಂದಾಗಿ ಮುಂದಿನ ಐದು ದಿನಗಳ ಅವಧಿಯಲ್ಲಿ ಗರಿಷ್ಠ ಉಷ್ಣಾಂಶವು 3ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Tags :
HeavyRainKarnatakaMonsoonRainThunderstormsWeatherWeatherAlert
Advertisement
Next Article
Advertisement