ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karnataka Rains : ಮತ್ತೆ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ| ಎಷ್ಟು ದಿನ ಮಳೆ ವಿವರ ಇಲ್ಲಿದೆ

Karnataka Rains:IMD warns of heavy rains across Karnataka for the next few days. Coastal, North, and South Interior Karnataka to witness downpours due to cyclone effect.
11:03 PM Oct 05, 2025 IST | ಶುಭಸಾಗರ್
Karnataka Rains:IMD warns of heavy rains across Karnataka for the next few days. Coastal, North, and South Interior Karnataka to witness downpours due to cyclone effect.

Karnataka Rains : ಮತ್ತೆ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ| ಎಷ್ಟು ದಿನ ಮಳೆ ವಿವರ ಇಲ್ಲಿದೆ

Advertisement

IMD warns of heavy rains across Karnataka for the next few days. Coastal, North, and South Interior Karnataka to witness downpours due to cyclone effect.

Karnataka Rains: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುವ ಲಕ್ಷಣ ಕಾಣುತ್ತಿಲ್ಲ.ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ (IMD)ಮಾಹಿತಿ ನೀಡಿದೆ.

ಮುಂದಿನ ಮೂರು ದಿನಗಳ ಅವಧಿಗೆ ಧಾರಾಕಾರ ಮಳೆ (rain)ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಂಡಮಾರುತದ ಪ್ರಭಾವದಿಂದ ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆ ಆಗುತ್ತಿದೆ. ಇದೀಗ ವಾಯುಭಾರ ಕುಸಿತದ ಪ್ರಭಾವದಿಂದ ಉತ್ತರ ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ.

Joida| ಅನಾರೋಗ್ಯದಿಂದ ಜೀವ ಚಲ್ಲಿದ ಪಣಸೋಲಿಯ ಗೌರಿ ಆನೆ

Advertisement

ಬಂಗಾಳ ಕೊಲ್ಲಿಯಲ್ಲಿ ವಾಯುಬಾರ ಕುಸಿತ ಕಂಡ ಪರಿಣಾಮ ಚಂಡಮಾರುತ ರೂಪುಗೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈಶಾನ್ಯ ಅರೇಬಿಯನ್ ಸಮುದ್ರದ ಮೇಲೆ ಬೀಸಿದ ತೀವ್ರ ಚಂಡಮಾರುತ ಪ್ರಭಾವವು ಕಳೆದ 6 ಗಂಟೆಗಳಲ್ಲಿ ಗಂಟೆಗೆ 18 ಕಿ.ಮೀ ವೇಗದಲ್ಲಿ ಪಶ್ಚಿಮಕ್ಕೆ ಚಲಿಸಿದೆ. ಇದು ಅಕ್ಟೋಬರ್ 5 ರ ವೇಳೆಗೆ ಪಶ್ಚಿಮ-ನೈಋತ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದ್ದು, ವಾಯುವ್ಯ ಮತ್ತು ಪಕ್ಕದ ಪಶ್ಚಿಮ ಮಧ್ಯ ಅರೇಬಿಯನ್ ಸಮುದ್ರವನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka|ಸೆಲ್ಫಿ ತೆಗೆಯಲು ಹೋಗಿ ಸಮುದ್ರಪಾಲಾದ ಶಿವಮೊಗ್ಗದ ಪ್ರವಾಸಿಗ

ದಕ್ಷಿಣ ಒಳನಾಡಿನಿಂದ ತಮಿಳುನಾಡಿನ ಕೊಮೊರಿನ್ ಪ್ರದೇಶದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರದ ಪ್ರದೇಶದಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಅಲ್ಲದೇ ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ತಮಿಳುನಾಡಿನ ಕರಾವಳಿಯಲ್ಲಿ ಸಮುದ್ರ ಮಟ್ಟದಿಂದ 3.1 ಕಿ.ಮೀ. ಎತ್ತರದಲ್ಲಿ ಮೇಲ್ಮುಖ ವಾಯು ಚಂಡಮಾರುತದ ಪ್ರಸರಣವಿದೆ ಐಎಂಡಿ ವರದಿ ಉಲ್ಲೇಖಿಸಿದೆ.

ಹವಾಮಾನ ಇಲಾಖೆ ಮಳೆ ಮಾಹಿತಿ:-

Karnataka rain IMD

ಎಲ್ಲೆಲ್ಲಿ ಮಳೆ ಬೀಳಲಿದೆ.

 ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದ್ದು ಸೋಮವಾರದಿಂದ ಅಲ್ಪ ಮಳೆ ,ಬಿಸಿಲಿನ ವಾತಾವರಣ ಇರಲಿದೆ. ನಂತರ  ಭಾರಿ ಹಾಗೂ ಮಧ್ಯಮ ಗಾತ್ರದ ಮಳೆ ಇರಲಿದೆ

ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರದಲ್ಲಿ ಧಾರಾಕಾರ ಮಳೆ ಆಗಲಿದೆ.

ಅಲ್ಲದೇ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಮಳೆ ವಿವರ .

Advertisement
Tags :
Arabian Sea CycloneBengaluru RainCoastal KarnatakaForecastHeavy rainIndia Meteorological DepartmentKarnataka MonsoonNorth Karnataka Rain
Advertisement
Next Article
Advertisement