Murdeshwara ಅದ್ದೂರಿಯಾಗಿ ನಡೆಯಿತು ಮಹಾರಥೋತ್ಸವ ಹೇಗುತ್ತು ವಿಡಿಯೋ ನೋಡಿ.
Murdeshwara news :-ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಮುರ್ಡೇಶ್ವರದ ಮಾತ್ತೋಬಾರ ಶ್ರೀ ಮುರ್ಡೇಶ್ವರ (murdeshwar)ದೇವರ ರಥೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತಾಧಿಗಳ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ಭಾನುವಾರ ಸಂಜೆ ನೆರವೇರಿತು.
ಜನವರಿ 14ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿ ಜ. 19ರಂದು ಮಹಾರಥೋತ್ಸವ ವಿಜ್ರಂಭಣೆಯಿಂದ ನೆರವೇರಿತು.
ಇದನ್ನೂ ಓದಿ:-Murdeshwar ದೇವಾಲಯದ ಗೋಪುರದ ತುತ್ತ ತುದಿಗೆ ನಿಂತು ಪ್ರವಾಸಿಗ ಮಾಡಿದ್ದೇನು ಗೊತ್ತಾ?
ಮಹಾರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಹೋಮ ಹವನಗಳನ್ನು ವಿಧಿವತ್ತಾಗಿ ನಡೆಸಲಾಯಿತು.
ಮಧ್ಯಾಹ್ನದಿಂದ ಸಾವಿರಾರು ಭಕ್ತಾಧಿಗಳು ರಥಕಾಣಿಕೆ ನೀಡಿ ಪೂಜೆ ಪುರಸ್ಕಾರ ನೆರವೇರಿಸಿ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಭಾನುವಾರ ಸಂಜೆ 5.30ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಮಾಹಾರಥವನ್ನು ದೇವಸ್ಥಾನದ ಕೆರೆಯ ಸುತ್ತ ಭಕ್ತಾದಿಗಳ ಜಯಘೋಷದೊಂದಿಗೆ ಎಳೆಯಲಾಯಿತು.
ರಥೋತ್ಸವದ ಸಂದರ್ಭದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಪಾಲ್ಗೊಂಡಿದ್ದರು.