Railway| ಕೊಂಕಣ ರೈಲ್ವೆ ಮಾರ್ಗದಲ್ಲಿ ಈ ಮೂರುದಿನ ವಿಶೇಷ ರೈಲು ಸಂಚಾರ-ವಿವರ ನೋಡಿ.
ಕಾರವಾರ:-ದಸರಾ (Dasara) ರಜೆ ಜೊತೆಗೆ ಹಬ್ಬ ಇರೋದಿಂದ್ರ ಊರಿನಿಂದ ಊರಿಗೆ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚುರುತ್ತದೆ.ಹೀಗಾಗಿ ಕೊಂಕಣ ರೈಲ್ವೆ ಮಾರ್ಗದಲ್ಲಿ ವಿಶೇಷ ರೈಲು ( Train) ಓಡಿಸಲು ರೈಲ್ವೆ ಇಲಾಖೆ ಸಮಮ್ಮತಿ ನೀಡಿದೆ.
ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ಅ. 10 ಹಾಗೂ ಅ. 12ರಂದು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ.
ಕುಂದಾಪುರ ರೈಲು ಹಿತರಕ್ಷಣ ಸಮಿತಿಯ ಗಣೇಶ್ ಪುತ್ರನ್ ಅವರು ಬಸ್ ಮತ್ತು ಈಗಿರುವ ರೈಲುಗಳ ಟಿಕೆಟ್ ಸಂಪೂರ್ಣ ಖಾಲಿಯಾದ ಬಗ್ಗೆ ಉಡುಪಿ ಸಂಸದರ ಗಮನ ಸೆಳೆದಿದ್ದರು.
ಬಸ್ ಟಿಕೆಟ್ ದರ ಏರಿಕೆಯೂ ಆಗಿದೆ. ಇದಕ್ಕೆ ತತ್‌ಕ್ಷಣವೇ ಸ್ಪಂದಿಸಿದ ಸಂಸದರು ರೈಲ್ವೇ ಇಲಾಖೆಗೆ ನವರಾತ್ರಿ ವಿಶೇಷ ರೈಲುಗಳ ಪ್ರಯಾಣಕ್ಕೆ ಸೂಚನೆ ನೀಡಿದ್ದರು.
ಮೈಸೂರಿನಿಂದ ಮೆಜೆಸ್ಟಿಕ್ ಮಾರ್ಗವಾಗಿ ಒಂದು ರೈಲು ಮತ್ತೂಂದು ರೈಲು ಯಶವಂತಪುರದಿಂದ ಹೊರಡಲಿದೆ. ಈ ಬಗ್ಗೆ ಸಂಸದರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟನೆ ನೀಡಿದ್ದಾರೆ.