Karnataka: ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ.! ಕಾರಣ ಏನು ಗೊತ್ತಾ..?

Karnataka: ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ.! ಕಾರಣ ಏನು ಗೊತ್ತಾ..?
ಚಿಕ್ಕಬಳ್ಳಾಪುರ:- ನಂದಿಗಿರಿಧಾಮದಲ್ಲಿ ಜೂನ್ 19 ರಂದು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಆದೇಶ ಮಾಡಿದ್ದಾರೆ.
ಜೂನ್ 16 ರ ಸಂಜೆ 5 ಗಂಟೆಯಿಂದ ಜೂನ್ 20 ರವರೆಗೆ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ನಂದಿಗಿರಿಧಾಮದ ಮೇಲ್ಭಾಗದ ವಸತಿ ಕೊಠಡಿಗಳನ್ನ ಮುಂಗಡ ಕಾಯ್ದಿರಿಸುವಿಕೆಗೂ ನಿಷೇಧ ವಿಧಿಸಿ ಆದೇಶ ಮಾಡಲಾಗಿದೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದೆ.
ಇದನ್ನೂ ಓದಿ:-Karnataka :ಪಕ್ಕದ ಊರಿಗೆ ಪಾತ್ರೆ ಕೊಟ್ಟವನಿಗೆ ಊರಿನವರ ಬಹಿಷ್ಕಾರ, 6000 ದಂಡ!
ಸಚಿವ ಸಂಪುಟಕ್ಕೆ ಬೇಕಾದ ಅಗತ್ಯ ಕಾರ್ಯಗಳನ್ನ ಕೈಗೊಳ್ಳುವ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶಕ್ಕೆ ( tourist) ವಾಹನಗಳ ಸಂಚಾರಕ್ಕೂ ನಿರ್ಧಿಸಲಾಗಿದೆ.
ಸಚಿವ ಸಂಪುಟ ಸಭೆಗೆ ಸನ್ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ.
ಈ ಸಮಯದಲ್ಲಿ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ ಹಾಗೂ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20 ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿಬರ್ಂಧಿಸಿ ಆದೇಶಿಸಲಾಗಿದೆ.
ಜೂನ್ 17 ರಿಂದ 19 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸುವಿಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಎನ್. ರವೀಂದ್ರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.