Karnataka Weather ಯಾವ ಭಾಗದಲ್ಲಿ ಚಳಿಯ ವಾತಾವರಣ ಹೆಚ್ಚಲಿದೆ ಇಲ್ಲಿದೆ ಮಾಹಿತಿ.
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕೆಲವು ದಿನಗಳವರೆಗೆ ರಾಜ್ಯದ (state) ಈ ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿದೆ ನೋಡಿ.
ರಾಜ್ಯದಲ್ಲಿ ಮುಂದಿನ 2 ದಿನಗಳಲ್ಲಿ ಬೀದರ್, ವಿಜಯಪುರ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಪ್ರಮಾಣದಲ್ಲಿ ಮತ್ತಷ್ಟು ಇಳಿಕೆಯಾಗಲಿದ್ದು, ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ:-Karnataka: ದ್ವಿತೀಯ PUC ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ ಎಂದು ಮಾಹಿತಿ ನೀಡಿದೆ.
ಇನ್ನು ಮುಂದಿನ ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಮತ್ತೆ ಏರಿಕೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಕೆಲವೆಡೆ ದಟ್ಟ ಮಂಜು ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ:-KUMTA -ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಮುಂದಾದ KSRTC ನಿರ್ವಾಹಕ! ಮುಂದೇನಾಯ್ತು ?
ಮಲೆನಾಡು ಭಾಗದಲ್ಲಿ ಚಳಿ ಹೆಚ್ಚಾಗಲಿದ್ದು ಕರಾವಳಿ ಭಾಗದಲ್ಲಿ ಮಧ್ಯಮ ಪ್ರಮಾಣದಲ್ಲಿ ಚಳಿ ಇರಲಿದೆ. ಕೆಲವು ಕಡೆ ಮೋಡ ಕವಿದ ವಾತಾವರಣ ಇದ್ದರೂ ಮಳೆಯ ಯಾವುದೇ ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.