Weather report| ಹವಾಮಾನ ವರದಿ 29 November 2024
Karnataka weather report :-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದ ರಾಜಧಾನಿ ಬೆಂಗಳೂರು (Bangalore) ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ (weather) ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ(Rain) ಸಾಧ್ಯತೆ ಇದೆ. ಸಂಜೆ ವೇಳೆ ಗಾಳಿ ಗಂಟೆಗೆ 60-70 ಕಿ.ಮೀ . ವೇಗದಲ್ಲಿ ಬೀಸಲಿದೆ.
ಇಂದಿನಿಂದ ಡಿಸೆಂಬರ್ 3 ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ.
ಇದನ್ನೂ ಓದಿ:-Karnataka ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹ! ಏನಿದು ಪ್ರಸ್ತಾವನೆ?
ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಡಿಸೆಂಬರ್ 1ರಿಂದ ಉಳಿದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚೆನೆ ಇದೆ.