Karwar |ಬೇಲಿಕೇರ ಅದಿರು ಪ್ರಕರಣ| ಕಾರವಾರ ಶಾಸಕ ಸೈಲ್ ಗೆ ನ.20 ರ ವರೆಗೆ ಜಾಮೀನು ವಿಸ್ತರಣೆ.
Karwar |ಬೇಲಿಕೇರ ಅದಿರು ಪ್ರಕರಣ| ಕಾರವಾರ ಶಾಸಕ ಸೈಲ್ ಗೆ ನ.20 ರ ವರೆಗೆ ಜಾಮೀನು ವಿಸ್ತರಣೆ.
ಕಾರವಾರ: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರ-ಅಂಕೋಲಾ (karwar -ankola) ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಶಾಸಕರಿಗೆ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನು ನ್ಯಾಯಾಲಯವು ನವೆಂಬರ್ 20ರ ವರೆಗೆ ವಿಸ್ತರಿಸಿ ಆದೇಶ ನೀಡಿದೆ.
Karwar|ವಯಸ್ಸಾದರೂ ವಿವಾಹವಾಗದೇ ಮನನೊಂದ ವ್ಯಕ್ತಿ ಚಾಕು ಇರಿದುಕೊಂಡು ಆತ್ಮಹತ್ಯೆ ಗೆ ಯತ್ನ
ನ್ಯಾಯಮೂರ್ತಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಶಾಸಕರ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲು ಅರ್ಹ ವೈದ್ಯರ ಹೆಸರನ್ನು ಸೂಚಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ನಿರ್ದೇಶನ ನೀಡಿದ್ದಾರೆ. ಶಾಸಕ ಸತೀಶ್ ಸೈಲ್‌ರವರು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.
Karwar: ಶಾಸಕ ಸೈಲ್ ಮನೆಯಮೇಲೆ ED ರೈಡ್ |ಸಿಕ್ಕಿದ್ದೇನು?
ವಿಶೇಷ ನ್ಯಾಯಾಲಯವು ಇತ್ತೀಚೆಗೆ ಸತೀಶ್ ಸೈಲ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಸೂಚಿಸಲಾದ ವೈದ್ಯಕೀಯ ಚಿಕಿತ್ಸೆಗೆ ಬದ್ಧರಾಗಿಲ್ಲ ಎಂಬ ಕಾರಣ ನೀಡಿ ಅವರ ವೈದ್ಯಕೀಯ ಜಾಮೀನನ್ನು ರದ್ದುಗೊಳಿಸಿ, ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
Belikeri case| ಅಕ್ರಮ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್ ಮಧ್ಯಂತರ ಜಾಮೀನು ರದ್ದು
ವಿಶೇಷ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಸೈಲ್ ಅವರು ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಮಧ್ಯಂತರ ಜಾಮೀನು ಮುಂದುವರೆಸಿತ್ತು. ಇದೀಗ ಮತ್ತೆ ಒಂದು ವಾರಗಳ ಕಾಲ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ.