For the best experience, open
https://m.kannadavani.news
on your mobile browser.
Advertisement

Karwar ED case:ಶಾಸಕ ಸತೀಶ್ ಸೈಲ್ 2 ದಿನ ಇ.ಡಿ ಕಸ್ಟಡಿಗೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪದಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಅವರನ್ನು 2 ದಿನ ಇ.ಡಿ ಕಸ್ಟಡಿಗೆ (ED Custody) ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
11:02 PM Sep 10, 2025 IST | ಶುಭಸಾಗರ್
ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪದಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಅವರನ್ನು 2 ದಿನ ಇ.ಡಿ ಕಸ್ಟಡಿಗೆ (ED Custody) ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
karwar ed case ಶಾಸಕ ಸತೀಶ್ ಸೈಲ್ 2 ದಿನ ಇ ಡಿ ಕಸ್ಟಡಿಗೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪದಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಅವರನ್ನು 2 ದಿನ ಇ.ಡಿ ಕಸ್ಟಡಿಗೆ (ED Custody) ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

Advertisement

ಮಧ್ಯಂತರ ಜಾಮೀನು ನೀಡುವಂತೆ ಸೈಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಅನಾರೋಗ್ಯದ ಹಿನ್ನೆಲೆ ಜಾಮೀನು ನೀಡಲು ಮನವಿ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುವ ಸಲುವಾಗಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಇ.ಡಿ ಕಸ್ಟಡಿಗೆ ಕೇಳಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಸತೀಶ್ ಸೈಲ್ ಅವರನ್ನು 2 ದಿನ ಇ.ಡಿ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ. ಸೆ.12ರಂದು ಸಂಜೆ 5 ಗಂಟೆಗೆ ಮತ್ತೆ ಕೋರ್ಟ್‌ ಮುಂದೆ ಹಾಜರುಪಡಿಸಲು ಸೂಚಿಸಲಾಗಿದೆ. ಇದನ್ನೂ ಓದಿ: Karwar news: ಈ ಗಣೇಶನಿಗೆ ಮುಸ್ಲೀಮರೇ ಪೂಜೆ-ಕಾರವಾರದಲ್ಲೊಂದು ಕೋಮು ಸೌಹಾರ್ಧ ಸಾರುವ ಗಣಪ

ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿತ್ತು.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ