Karwar | ಪ್ರಸಿದ್ಧ ರಾಧಾಕೃಷ್ಣ ದೇವಾಲಯದಲ್ಲಿ ಕಳ್ಳತನ | ಲಕ್ಷಾಂತರ ರುಪಾಯಿ ಮೌಲ್ಯದ ಆಭರಣ ಕಳವು
Karwar | ಪ್ರಸಿದ್ಧ ರಾಧಾಕೃಷ್ಣ ದೇವಾಲಯದಲ್ಲಿ ಕಳ್ಳತನ | ಲಕ್ಷಾಂತರ ರುಪಾಯಿ ಮೌಲ್ಯದ ಆಭರಣ ಕಳವು.
ಕಾರವಾರ(october 21, 2025):- ಉತ್ತರ ಕನ್ನಡ ಜಿಲ್ಲೆಯ ಕಾರವಾರ (karwar)ನಗರದಲ್ಲಿರುವ ಪ್ರಸಿದ್ಧ ರಾಧಾಕೃಷ್ಣ ದೇವಾಲಯದಲ್ಲಿ ದೇವಾಲಯದ ಚಾವಣಿಯ ಹಂಚು ಮುರಿದು ಕಳ್ಳತನ ಮಾಡಿದ ಘಟನೆ ನಡೆದಿದೆ.
Karwar| ಕಾರವಾರ,ಗೋವಾ ಕರಾವಳಿಯಲ್ಲಿ ಪ್ರಧಾನಿ ಮೋದಿ | ಹೇಗಿತ್ತು ಗೊತ್ತಾ ದೀಪಾವಳಿ ಝಲಕ್ ?
ಕಳ್ಳರು ದೇವಾಲಯದ ಮೇಲ್ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೇವರ ಅಲಂಕಾರಕ್ಕಾಗಿ ಬಳಸುವ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದಾರೆ.
ಇಂದು ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುವ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಒಳಭಾಗ ಅಸ್ತವ್ಯಸ್ತಗೊಂಡಿರುವುದನ್ನು ಕಂಡು ದೇವಾಲಯ ಸಮಿತಿ ಸದಸ್ಯರು ಹಾಗೂ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂದಾಜು ಐದು ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ವಸ್ತುಗಳು ಎನ್ನಲಾಗುತಿದ್ದು ,ಕಾರವಾರ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳವಾದ ವಸ್ತುಗಳ ನಿಖರ ಮೌಲ್ಯ ಅಂದಾಜು ಮಾಡುವ ಕಾರ್ಯ ನಡೆಯುತ್ತಿದೆ. ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.