Karwar:ಶಿರಸಿಯ ಸರ್ಕಾರಿ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ ಪರಿವರ್ತನೆ -ಆರೋಗ್ಯ ಸಚಿವರು ಸಭೆಯಲ್ಲಿ ಹೇಳಿದ್ದೇನು?
Karwar:ಶಿರಸಿಯ ಸರ್ಕಾರಿ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ ಪರಿವರ್ತನೆ -ಆರೋಗ್ಯ ಸಚಿವರು ಸಭೆಯಲ್ಲಿ ಹೇಳಿದ್ದೇನು?
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕಾರವಾರದ (karwar)ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ (denesh gundu rao)ರವರು ಉತ್ತರ ಕನ್ನಡ ಜಿಲ್ಲಾ ನಾಗರೀಕ ಸಂಘಸಂಸ್ಥೆಗಳ ಒಕ್ಕೂಟ ದೊಂದಿಗೆ ಜಿಲ್ಲೆಯ ಆರೋಗ್ಯ ಇಲಾಖೆ ಸಂಬಂಧಿಸಿದ ಸಮಸ್ಯೆ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕಾರವಾರದ ಜಿಲ್ಲಾಸ್ಪತ್ರೆಯನ್ನು ವೈದ್ಯಕೀಯ ಮೆಡಿಕಲ್ ಕಾಲೇಜಿನಿಂದ ಬೇರ್ಪಡಿಸಿ ಪ್ರತ್ತೇಕ ಜಿಲ್ಲಾಸ್ಪತ್ರೆಯನ್ನು ಮಾಡಬೇಕು ಎಂದು ಒಕ್ಕೂಟದವರು ಕೇಳಿದಾಗ ಇದು ಸಾಧ್ಯವಿಲ್ಲ, ಜಿಲ್ಲಾಸ್ಪತ್ರೆ ಜಿಲ್ಲೆಗೆ ಅವಷ್ಯವಿದೆ. ಹೀಗಾಗಿ ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮಾಡುತ್ತೇವೆ ಕಾರವಾರದ ಮೆಡಿಕಲ್ ಕಾಲೇಜಿನ ಆಸ್ಪತ್ರೆಯನ್ನು ಮಾಡಲು ಸಾಧ್ಯವಿಲ್ಲ ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ ಇದೆ . ಇವುಗಳನ್ನು ತುಂಬುವ ಕೆಲಸ ಮಾಡುತ್ತೇವೆ ಆದರೇ ಈ ಜಿಲ್ಲೆಯ ಯಾರೂ ಬರಲು ಇಷ್ಟಪಡುವುದಿಲ್ಲ , ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ವ್ಯವಸ್ಥೆ ಮಾಡುತ್ತೇವೆ.ಈ ಬಗ್ಗೆ ಕಾರ್ಯ ಚಾಲ್ತಿಯಲ್ಲಿದೆ ಎಂದರು.