Uttara kannda MP ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿ ಚಿರತೆ ಪ್ರತ್ಯಕ್ಷ!
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ಆಹಾರ ಅರಸಿ ಬಂದ ಚಿರತೆಯೊಂದು (chitha) ನುಗ್ಗಿದ್ದು ಸಂಸದರ ಮನೆಯ ಸಾಕುನಾಯಿಯನ್ನು ಅಟ್ಟಿಸಿಕೊಂಡು ಹೋಗಿದೆ.
ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಸೋಮವಾರ ಮಧ್ಯರಾತ್ರಿ ಶಿರಸಿ (sirsi) ತಾಲೂಕಿನ ಕಾಗೇರಿ (kageri) ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹಾಗೂ ಕುಟುಂಬ ಸದಸ್ಯರು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು.
ಇದೇ ಸಂದರ್ಭದಲ್ಲಿ ಚಿರತೆ ದಾಳಿಮಾಡಿದ್ದು ಮನೆಯ ಮುಂಭಾಗದಲ್ಲಿದ್ದ ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ.
ಇದನ್ನೂ ಓದಿ:- Sirsi ಭತ್ತದ ಹುಲ್ಲು ಕೊಂಡೊಯ್ಯುತಿದ್ದ ಲಾರಿಗೆ ಬೆಂಕಿ ! ಸಾವಿರಾರು ರೂಪಾಯಿ ನಷ್ಟ.
ಅದೃಷ್ಟವಶಾತ್ ಚಿರತೆ ದಾಳಿಯಿಂದ ಸಾಕು ನಾಯಿ ತಪ್ಪಿಸಿಕೊಂಡಿದೆ. ರಾತ್ರಿ ಮನೆಯ ನಾಯಿ ಹೆಚ್ಚು ಕೂಗಿದ್ದರಿಂದಾಗಿ ಇಂದು ಬೆಳಗ್ಗೆ ಮನೆಯವರು ಸಿಸಿ ಟಿವಿ ದೃಶ್ಯ ವೀಕ್ಷಿಸಿದಾಗ ಚಿರತೆ ಮನೆಗೆ ಬಂದ ವಿಷಯ ತಿಳಿದಿದೆ.
ಘಟನೆ ಸಂಬಂಧ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:-Sirsi ಬಾಲಕಿ ಮೇಲಿನ ದೌರ್ಜನ್ಯಕ್ಕೆ 20 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಧ್ಯ ಚಿರತೆ ಇವರ ಮನೆಬಾಗಿಲಿಗೆ ಬಂದರೂ ಯಾವುದೇ ತೊಂದರೆಯಾಗಿಲ್ಲ. ಇನ್ನು ಈಭಾಗದಲ್ಲಿ ಚಿರತೆ ಓಡಾಟ ಸಾಮಾನ್ಯವಾಗಿದ್ದು ,ಇತ್ತೀಚೆಗೆ ಅಹಾರ ಅರಸಿ ನಾಡಿನತ್ತ ಆಗಮಿಸುತಿದ್ದು ಇದೇ ಮೊದಲಬಾರಿ ಕಾಗೇರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ.
ವಿಡಿಯೋ ವೀಕ್ಷಿಸಲು ಕನ್ನಡವಾಣಿ ಫೇಸ್ ಬುಕ್ ಪೇಜ್ ಲಿಂಕ್ ಕ್ಲಿಕ್ ಮಾಡಿ:-https://www.facebook.com/share/v/1QsL9XgnN4/
https://www.facebook.com/share/v/1QsL9XgnN4/