ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Mundgodu ಅಪಹರಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ನೂರಾನಿಗಲ್ಲಿ ನಿವಾಸಿ ಜಮೀರ ಅಹ್ಮದ ದರ್ಗಾವಾಲೆ ಎಂಬುವರ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
11:28 PM Jan 27, 2025 IST | ಶುಭಸಾಗರ್
Mundgod kidnapping case two people arrest
ಪ್ರಕೃತಿ ಮೆಡಿಕಲ್ ,ಕಾರವಾರ.

ಮುಂಡಗೋಡ ಅಪಹರಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Advertisement

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ (mundgodu) ಪಟ್ಟಣದ ನೂರಾನಿಗಲ್ಲಿ ನಿವಾಸಿ ಜಮೀರ ಅಹ್ಮದ ದರ್ಗಾವಾಲೆ ಎಂಬುವರ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:-Mundgod : ಸಿನಿಮೀಯ ರೀತಿಯಲ್ಲಿ ಚಾಕು ತೋರಿಸಿ ಉದ್ಯಮಿ ಅಪಹರಣ

ಆರೋಪಿಗಳಾದ ಶಬ್ಬಿರ ಅಹ್ಮದ ಮಹ್ಮದ ಹನೀಫ ಬಿಜಾಪುರ ಹಾಗೂ ಸಾಧಿಕ ದಾವಲಸಾಬ ವಾಲೀಕಾರ ಇಬ್ಬರನ್ನೂ ಬಂಧಿಸಲಾಗಿದೆ.

Advertisement

ಇದನ್ನೂ ಓದಿ:-Mundgod ನಲ್ಲಿದೆ ಬಾಳಂತಿ ದೇವರು ಈ ದೇವರ ಜಾತ್ರೆ ವಿಷೇಶವೇನು ಗೊತ್ತಾ?

ಜ.9ರಂದು ಮುಂಡಗೋಡಿನ ಶಾಸಕರ ಮಾದರಿ ಶಾಲೆ ಎದುರುಗಡೆ ಜಮೀರ ಅಹ್ಮದ ದರ್ಗಾವಾಲೆ ಎಂಬಾತನನ್ನು ಅಪಹರಿಸಿ 18 ಲಕ್ಷ ಹಣ ಪಡೆದು ಬಿಟ್ಟಿದ್ದರು. ಈಗಾಗಲೇ ಪ್ರಕರಣದಲ್ಲಿ ಪಾಲ್ಗೊಂಡಿದ್ದ 11 ಜನ ಆರೋಪಿಗಳನ್ನು ಬಂಧಿಸಿ, ದರೋಡೆ ಮಾಡಿದ್ದ ಹಣದ ಪೈಕಿ 17.75 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ:-Mundgod : ಉದ್ಯಮಿ ಅಪಹರಣ ಪ್ರಕರಣ ,ಐದು ಜನರ ಬಂಧನ

ಕಾರ್ಯಾಚರಣೆಯಲ್ಲಿ ಎಸ್.ಪಿ ಎಮ್. ನಾರಾಯಣ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ ನಾಯ್ಕ ,ಡಿವೈ ಎಸ್.ಪಿ ಗಣೇಶ ಕೆ.ಎಲ್. ರವರ ಮಾರ್ಗದರ್ಶನದಲ್ಲಿ ಮುಂಡಗೋಡು ಠಾಣೆ ಸಿ.ಪಿ.ಐ ರಂಗನಾಥ ನೀಲಮ್ಮನವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

Advertisement
Advertisement
Next Article
Advertisement