ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Bhatkal| ಲಿಪ್ಟ್ ಕುಸಿದು ಇಬ್ಬರು ಕಾರ್ಮಿಕರು ಸಾವು

Murdeshwar tragedy: Two workers, Prabhakar Shetty and Babanna Poojari, lost their lives after a temporary lift collapsed during a building construction in Bhatkal. Police have registered a case against the building owner and lift firm for safety negligence.
06:46 PM Nov 07, 2025 IST | ಶುಭಸಾಗರ್

ಭಟ್ಕಳ: ಕಟ್ಟಡ ಕಾಮಗಾರಿಯ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡ ದಾರುಣ ಘಟನೆ ಮುರುಡೇಶ್ವರದಲ್ಲಿ  ಸಂಭವಿಸಿದೆ.

ಮೃತರನ್ನು ಮುರುಡೇಶ್ವರ ಬಸ್ತಿಯ ಪ್ರಭಾಕರ್ ಮುತಪ್ಪ ಶೆಟ್ಟಿ (48) ಹಾಗೂ ಕುಂದಾಪುರ ತಾಲೂಕಿನ ಗೋಳಿಹೊಳೆಯ ಬಾಬಣ್ಣ ಪೂಜಾರಿ (45) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾಮತ್ ಯಾತ್ರಿನಿವಾಸದ ಮಾಲೀಕರಾದ ವೆಂಕಟದಾಸ ಕಾಮತ್ ಅವರ ಹೊಸ ಕಟ್ಟಡ ಕಾಮಗಾರಿಯಲ್ಲಿ ಮಿನಿ ಲಿಫ್ಟ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಈ ದುರಂತ ನಡೆದಿದೆ. ಕಟ್ಟಡದ ಮೇಲ್ಮಹಡಿಗಳಿಗೆ ವಸ್ತುಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಲಿಫ್ಟ್‌ನ ಸೆಫ್ಟಿ ಲಾಕ್ ಹಾಳಾಗಿ ಕೇಬಲ್ ಕಟ್ ಆಗಿದರಿಂದ, ಇಬ್ಬರು ಕಾರ್ಮಿಕರು ಇದ್ದ ಲಿಫ್ಟ್ ಕೆಳಕ್ಕೆ ಬಿದ್ದು ನೆಲಕ್ಕುರುಳಿದೆ.

Advertisement

ಬಿದ್ದ ಝಟಕದಲ್ಲಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ವರ್ಗಾಯಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದರು.

Murdeshwara|ಜಮಖಂಡಿಯ 102 ವರ್ಷದ ಪುರಾತನ ಆಂಜನೇಯ ಮೂರ್ತಿ ಮುರ್ಡೇಶ್ವರ ಸಮುದ್ರದಲ್ಲಿ!

ಘಟನಾ ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕನ್‌ಸ್ಟ್ರಕ್ಷನ್ ಮಿನಿ ಲಿಫ್ಟ್ ತಯಾರಿಕಾ ಸಂಸ್ಥೆ ಹಾಗೂ ಕಟ್ಟಡ ಮಾಲೀಕರಾದ ವೆಂಕಟದಾಸ ಕಾಮತ್ ಅವರ ವಿರುದ್ಧ ಮೃತ ಪ್ರಭಾಕರ್ ಶೆಟ್ಟಿ ಅವರ ಪುತ್ರ ಶ್ರವಣ ಶೆಟ್ಟಿ ದೂರು ದಾಖಲಿಸಿದ್ದಾರೆ. ದೂರು ಪ್ರಕಾರ, “ಅಪಘಾತಕ್ಕೆ ಸುರಕ್ಷತಾ ಕ್ರಮಗಳ ಕೊರತೆ ಹಾಗೂ ಯಂತ್ರೋಪಕರಣದ ದೋಷವೇ ಕಾರಣ” ಎಂದು ಆರೋಪಿಸಲಾಗಿದೆ.

ಮುರುಡೇಶ್ವರ ಠಾಣೆ ಪಿಎಸೈ ಹನುಮಂತ ಬಿರಾಧರ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಸ್ಥಳೀಯರು ಹಾಗೂ ಕಾರ್ಮಿಕ ವರ್ಗದಲ್ಲಿ ಆಘಾತ ಮತ್ತು ಶೋಕದ ವಾತಾವರಣವನ್ನು ಉಂಟುಮಾಡಿದೆ.

Advertisement
Tags :
Babanna PoojariBhatkal newsConstruction site accidentKarnataka newsLift collapseMurdeshwar accidentPrabhakar ShettySafety negligenceUttara Kannada newsVenkatadas Kamat
Advertisement
Next Article
Advertisement