Naxal Encounter : ವಿಕ್ರಮ್ ಗೌಡ ಯಾರು ? ಏನಿದು ಕಥೆ!
ಉಡುಪಿ 19 ನವೆಂಬರ್ 2024 : ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್ ಕಾರ್ಯಕರ್ತ ವಿಕ್ರಂ ಗೌಡನನ್ನು (Vikram Gowda) ಎನ್‌ಕೌಂಟರ್ (Encounter) ಮಾಡಿ ಹತ್ಯೆ ಮಾಡಲಾಗಿದೆ.
ನಕ್ಸಲ್ ನಿಗ್ರಹ ದಳ (ANF) ಮತ್ತು ನಕ್ಸಲರ (Naxal) ಮಧ್ಯೆ ಸೋಮವಾರ ಸಂಜೆ ಗುಂಡಿನ ಕಾಳಗ ನಡೆದಿದೆ. ಈ ಘಟನೆಯಲ್ಲಿ ಓರ್ವ ಹತನಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ 15 ದಿನಗಳಿಂದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್ ಕೂಂಬಿಂಗ್ ನಡೆಸುತ್ತಿದೆ.
ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಎಎನ್‌ಎಫ್ ಮೇಲೆ ದಾಳಿ ನಡೆಸಿದ್ದಾರೆ. ದಾಳಿ-ಪ್ರತಿದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಉಳಿದವರು ಪರಾರಿಯಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.
ಕೆಲ ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಮನೆಗಳಿಗೆ ನಕ್ಸಲರು ಭೇಟಿ ನೀಡಿದ್ದರು. ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ, ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಚರ್ಚಿಸಿದ್ದರು ಎಂದು ಹೇಳಲಾಗಿದೆ.
ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ (Kadaba) ಮನೆಗೆ ನಕ್ಸಲರು ಬಂದಿದ್ದ ಶಂಕೆ ವ್ಯಕ್ತವಾಗಿತ್ತು.
ಕೊಂಬಾರು ಗ್ರಾಮದ ಚೆರು ಗ್ರಾಮದ ಮನೆಗೆ ತಡರಾತ್ರಿ ಬಂದ 6 ಮಂದಿ ಎರಡು ಗಂಟೆಗಳ ಕಾಲ ಇದ್ದು ಮನೆಯಲ್ಲಿ ಊಟ ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದ ಮಾಹಿತಿ ಲಭ್ಯವಾಗಿತ್ತು. ಈ ವಿಚಾರ ತಿಳಿದ ಬೆನ್ನಲ್ಲೇ ನಕ್ಸಲ್ ನಿಗ್ರಹ ದಳಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿತ್ತು.
ಯಾರು ಈ ವಿಕ್ರಂ ಗೌಡ?
ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ವಹಿಸಿಕೊಂಡಿದ್ದರು.
20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ.
ಇದಲ್ಲದೇ 2016ರಲ್ಲಿ ಕೇರಳ ಪೊಲೀಸರಿಂದಲೂ ತಪ್ಪಿಸಿಕೊಂಡಿದ್ದನು.
ಈ ಹಿಂದೆ ಹತ್ಯೆಯಾಗಿದ್ದ ಗೌರಿ ಲಂಕೇಶ್ ರವರ ನಿಲುವಿಗೂ ವಿರೋಧ ಹೊಂದಿದ್ದನು.
ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್‌ಕೌಂಟರ್ ಮಾಡಿದ್ದಾರೆ. ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ. -ಜಿ.ಪರಮೇಶ್ವರ್ .ಗೃಹ ಸಚಿವಒಂದು ವಾರದ ಹಿಂದೆ ಬಂಧಿಸಿದ್ದ ನಕ್ಸಲರು ಯಾರು?
ಒಂದು ವಾರದ ಹಿಂದೆ ಬಂಧಿಸಿದ್ದ ನಕ್ಸಲರು ಯಾರು ಎಂಬ ಪ್ರಶ್ನೆ ಏಳುತಿದ್ದರೇ ವಿಕ್ರಮ್ ಗೌಡರನ್ನ ನಕಲಿ ಎನ್ ಕೌಂಟರ್ ಮಾಡಿದರಾ ಎಂಬ ಪ್ರಶ್ನೆ ಏಳುತ್ತಿದೆ.
ಒಂದು ವಾರದ ಹಿಂದೆ ವಿಕ್ರಮ್ ಗೌಡನನ್ನು ಬಂಧಿಸಲಾಗಿತ್ತಾ ಅಥವಾ ಆತನೊಂದಿಗೆ ಸಹಚರರಾದ ಸುಂದರಿ ,ಮಂಡಗಾರು ಲತಾ ಇವರನ್ನು ಬಂಧಿಸಿ ವಿಕ್ರಮ್ ಗೌಡ ನನ್ನು ಮಾತ್ರ ಎನ್ ಕೌಂಟರ್ ಮಾಡಲಾಯ್ತ ಎಂಬ ಅನುಮಾನ ಮೂಡುವಂತಾಗಿದೆ. ಇದಕ್ಕೆ ಪೊಲೀಸರೇ ಉತ್ತರ ನೀಡಬೇಕಿದೆ.
ಈ ಹಿಂದೆ ಧರ್ಮಸ್ಥಳದಲ್ಲಿ ಮೂವರು ನಕ್ಸಲರನ್ನು ಬಂಧಿಸಿದ್ದರು, ಅವರ ಬಂಧೂಕುಗಳನ್ನು ವಶಕ್ಕೆ ಪಡೆಯಲಾಗಿತ್ತು .ಇವರೆಲ್ಲರೂ ಚಿಕ್ಕಮಗಳೂರು ಮೂಲದವರು ಎಂಬ ಸುದ್ದಿ ಸಹ ಹರಡಿತ್ತು.
ವಿಕ್ರಮ್ ಗೌಡ ಗೌಡ್ಲು ಎಂಬ ಆಧಿವಾಸಿ ಜನಾಂಗದ ಯುವಕ. ಕುದುರೆಮುಖ ರಾಷ್ಟ್ರೀಯ ಉದ್ಯೋನ ಯೋಜನೆ ವಿರೋಧಿ ಹೋರಾಟದ ಮೂಲಕ ಮುನ್ನೆಲೆಗೆ ಬಂದ ಆಧಿವಾಸಿ ದಲಿತ ಯುವಕ.
ಆತ ಹಲವು ವರ್ಷದಿಂದ ಅಜ್ಞಾತನಾಗಿದ್ದನು. ಈತನ ಮೇಲೆ ಹಲವು ಪ್ರಕರಣ ದಾಖಲಾಗಿತ್ತು . ಇದರ ಜೊತೆಗೆ ಉಡುಪಿಯ ಮಹದೇವ ಮಹಲೆ ಎಂಬ ಪೊಲೀಸ್ ಸಿಬ್ಬಂದಿ ಹತ್ಯೆ ಕುರಿತು FIR ದಾಖಲಾಗಿತ್ತು. ಆದರೇ ಕೊನೆಗೆ ಪೊಲೀಸರ ತಂಡಗಳೇ ಮುಖಾಮುಖಿಯಾಗಿ ಫೈರಿಂಗ್ ಮಾಡಿಕೊಂಡಾಗ ಮೃತರಾಗಿದ್ದ ಸತ್ಯ ಹೊರಬಂದಿತ್ತು.
ಇದನ್ನೂ ಓದಿ:-Karnataka: ಜನವಸತಿ ಪ್ರದೇಶಗಳತ್ತ ಆನೆಗಳ ಹಾವಳಿ ವಿಡಿಯೋ ನೋಡಿ.
ಇದೀಗ ಶರಣಾಗಲು ಬಂದ ನಕ್ಸಲರನ್ನು ಎನ್ ಕೌಂಟರ್ ಹೆಸರಿನಲ್ಲಿ ಹತ್ಯೆ ಮಾಡಲಾಗಿದೆಯೇ ಎಂಬ ಪ್ರಶ್ನೆ ಏಳುವಂತಾಗಿದ್ದು ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ತನಿಖೆ ಆಗಬೇಕು ಎಂಬುದು ಹಲವರ ವಾದವಾಗಿದೆ.