ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Bhatkal:ಅಡಿಕೆ ಕಳ್ಳತನ -ಮಾಲು ಸಮೇತ ನಾಲ್ವರ ಬಂಧನ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟಗೊಂಡ ಗ್ರಾಮದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣವನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯವರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾರೆ.
02:51 PM Aug 10, 2025 IST | ಶುಭಸಾಗರ್

ಬಂಧಿತರು ಭಟ್ಕಳದ (bhatkal) ಮೊಹಮ್ಮದ್ ಸಾಧಿಕ್ ಶೇಖ (26), ಮೊಹಮ್ಮದ್ ಖಾಜಾ (20) (ಬಿಳಾಲಖಂಡ ಗುಳ್ಳೆ), ಮೊಹಮ್ಮದ್ ಇರ್ಶಾದ್ (28), ಮೊಹಮ್ಮದ್ ಮುಸಾದಿಕ್ (36) (ಮೂಸಾನಗರ) ಎಂದಾಗಿದ್ದು ಪರಾರಿ ಯಾದ ಆರೋಪಿಗಳಾದ ಮೊಹಮ್ಮದ್ ,ನಿಜಾಮ್ ಹೆಬಳೆ ಎಂದಾಗಿದ್ದು ಇವರ ಹುಟುಕಾಟ ನಡೆದಿದೆ.

Bhatkal-Arecanut theft accused

ಸುಮಾರು ಎರಡು ತಿಂಗಳ ಹಿಂದೆ ಸಾಧಿಕ್ ಶೇಖ ಮತ್ತು ಖಾಜಾ, ನಾಗಪ್ಪಯ್ಯ ಭಟ್ಟ ಅವರ ಹೊಸ ಮನೆಯ ಟೈಲ್ಸ್ ಹಾಕುವ ಕಾಮಗಾರಿ ನಡೆಸುತ್ತಿದ್ದಾಗ, ಪಕ್ಕದ ಹಳೆಯ ಮನೆಯಲ್ಲಿ ಸಂಗ್ರಹಿಸಿದ್ದ ಅಡಿಕೆ ಚೀಲವನ್ನು ಗಮನಿಸಿದ್ದರು. ಬಳಿಕ ತಮ್ಮ ಸಹಚರರ ಸಹಾಯದಿಂದ ಕೆಲ ದಿನಗಳ ನಂತರ ಮಧ್ಯರಾತ್ರಿ ಆ ಮನೆಗೆ ನುಗ್ಗಿ ಅಡಿಕೆ ಚೀಲ ಕದ್ದೊಯ್ದಿದ್ದರು.

Advertisement

ಇದನ್ನೂ ಓದಿ:-Bhatkal:ಸಮುದ್ರದಲ್ಲಿ ಪಲ್ಟಿಯಾದ ಬೋಟ್ 4ಮೀನುಗಾರರು ನಾಪತ್ತೆ,ಇಬ್ಬರ ರಕ್ಷಣೆ

ಮನೆಯ ಮಾಲಿಕ ನಾಗಪ್ಪಯ್ಯ ಭಟ್ಟ ಅವರು ಜುಲೈನಲ್ಲಿ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದು, ಅವರಿಂದ 175 ಕೆ.ಜಿ. ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ಮಂಜುನಾಥ ಎ. ಲಿಂಗಾರೆಡ್ಡಿ, ಎಎಸ್‌ಐ ಗಣಪತಿ ಬೆನಕಟ್ಟಿ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.

Advertisement
Tags :
Arecanut theftBhatkal newsKarnatakaPoliceUttara Kannada
Advertisement
Next Article
Advertisement