Comedy actor :ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆ
Comedy actor :ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಾರವಾರ:- ಝೀ ಕನ್ನಡ (zee kannada)ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಕಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ(yallapur) ತಾಲೂಕಿನ ವಜ್ರಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿ ಯ ಸಿದ್ದಿ ಜನಾಂಗದ ಯುವಕ ಈ ಹಿಂದೆ ಝೀ ಕನ್ನಡದ ಕಾಮಡಿ ಕಿಲಾಡಿಗಳು ಎಂಬ ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದನು.
ಇದನ್ನೂ ಓದಿ:-Yallapur:ಜಲಪಾತ ವೀಕ್ಷಣೆಗೆ ಹೋದವರು ಜಸ್ಟ್ ಮಿಸ್ ! ಮೂರು ಜನರ ರಕ್ಷಣೆ! ವಿಡಿಯೋ ನೋಡಿ
ನಿನಾಸಂ ನಲ್ಲಿ ನಾಟಕ ತರಬೇತಿ ಪಡೆದಿದ್ದ ಈತ ಉತ್ತಮ ಯೋಗ ಪಟು ಕೂಡ. ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕಪುಟ್ಟ ಪಾತ್ರಗಳನ್ನು ಮಾಡುತಿದ್ದ ಈತನಿಗೆ ಅವಕಾಶಗಳು ಹೆಚ್ಚು ಸಿಗಲಿಲ್ಲ. ಇದರಿಂದಾಗಿ ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದನು. ಇನ್ನು ರಿಯಾಲಿಟಿ ಶೋ ನಿಂದ ಪ್ರಸಿದ್ಧರಾಗಿದ್ದ ಇವರು ಸಾಕಷ್ಟು ಅಭಿಮಾನಿಗಳನ್ನ ಸಹ ಹೊಂದಿದ್ದರು.
ಆದರೇ ಅವಕಾಶ ಸಿಗದೇ ಕೂಲಿ ಕೆಲಸ ಮಾಡುತಿದ್ದ ಈತನು ಕಿನ್ನತೆಗೊಳಗಾಗಿದ್ದು, ಕಳೆದ ಮೂರು ತಿಂಗಳ ಹಿಂದೆ ನನ್ನ ಬಗ್ಗೆ ಜನ ಆಡಿಕೊಳ್ಳುತ್ತಾರೆ,ಟಾರ್ಗೆಟ್ ಮಾಡುತ್ತಾರೆ ಜೀವನ ಬೇಡ ಅನಿಸುತ್ತಿದೆ ಎಂದು ಮಾನಸಿಕ ಕಿನ್ನತೆಗೆ ಒಳಗಾಗಿದ್ದು ಕ್ರಿಮ್ಸ್ ನಲ್ಲಿ ವೈದ್ಯೋಪಚಾರ ಪಡೆದಿದ್ದನು. ಪತ್ನಿ ಜೊತೆ ಮನೆಯೊಂದಕ್ಕೆ ಕೆಲಸಕ್ಕಾಗಿ ತೆರಳಿದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದು , ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.