ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Dharmasthala: ಆರು ತಾಸು ಕಾರ್ಯಾಚರಣೆ ನಡೆದರೂ ಸಿಗದ ಅವಶೇಷ! ಇಡೀ ದಿನ ಏನಾಯ್ತು?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಬುರುಡೆ ರಹಸ್ಯಕ್ಕೆ (Dharmasthala Case) ಸಂಬಂಧಿಸಿದಂತೆ ನಿಗದಿ ಪಡಿಸಿದ ಪಾಯಿಂಟ್(point) 13 ರಲ್ಲಿ 6 ತಾಸು ಹುಡುಕಾಟ ನೆಡೆಸಿದ್ರೂ ಯಾವುದೇ ಅವಶೇಷಗಳು ಸಹ ಪತ್ತೆಯಾಗಿಲ್ಲ.
10:17 PM Aug 12, 2025 IST | ಶುಭಸಾಗರ್

ನಿನ್ನೆ (ಸೋಮವಾರ )ನೇತ್ರಾವತಿ ತಟದ ಪಾಯಿಂಟ್ 13ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರೇಡಾರ್ (GPR) ಮೂಲಕ ಡೆಮೋ ನಡೆಸಿ ತೆರಳಿದ್ದ ವಿಶೇಷ ತನಿಖಾ ತಂಡ(SIT) ಇಂದು ಶೋಧ ನಡೆಸಿತು.

Advertisement

ತೀವ್ರ ಕುತುಹಲಕ್ಕೆ ಕಾರಣವಾಗಿದ್ದ  ಪಾಯಿಂಟ್ ನಂಬರ್ 13ರಲ್ಲಿ ಮುಸುಕುದಾರಿ ಸಮ್ಮುಖದಲ್ಲಿ ಅಸ್ಥಿ ಶೋಧ ನಡೆಸಲಾಯಿತು.

ಪ್ರಕೃತಿ ಮೆಡಿಕಲ್ ,ಕಾರವಾರ.

ಪಾಯಿಂಟ್ 13ರಲ್ಲಿ ಮೂರು ಪಟ್ಟು ಜಾಗವನ್ನು ಗುರುತು ಮಾಡಲಾಗಿತ್ತು. ಕೆಎಸ್‌ಆರ್‌ಪಿ (KSRP) ಸಹಿತ ಶಸ್ತ್ರಸಜ್ಜಿತ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳಕ್ಕೆ ಖುದ್ದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಆಗಮಿಸಿ ಮಾಹಿತಿ ಪಡೆದರು

ಮಧ್ಯಾಹ್ನದ ಹೊತ್ತಿಗೆ ಡ್ರೋನ್ ಮೌಂಟೆಡ್ ಜಿಪಿಆರ್‌ನಿಂದ ಸಂಗ್ರಹಿಸಿದ ಫುಟೇಜ್ ಆಧರಿಸಿ 2 ಹಿಟಾಚಿಗಳ ಮೂಲಕ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ಓದಿ:-Karnataka:ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್‌ ರಾಜಣ್ಣ ಕಿಕ್‌ಔಟ್‌ ! ದಿಡೀರ್ ಬೆಳವಣಿಗೆ ಏನಾಯ್ತು?

 ಈ ಹಿಂದೆ‌  ನೆರೆಯಿಂದ ಮಣ್ಣು ಸ್ವಲ್ಪ ಕೊಚ್ಚಿ ಹೋಗಿತ್ತು. ಜೊತೆಗೆ ರಸ್ತೆ ನಿರ್ಮಾಣ ಸಂಬಂಧ ಪಂಚಾಯತ್‌ 100  ಲೋಡ್ ಮಣ್ಣನ್ನು  ಹಾಕಿತ್ತು. ಹೀಗಾಗಿ ಈ ಮಣ್ಣುಗಳನ್ನು ತೆಗೆದು ಕಾರ್ಯಾಚರಣೆ ನಡೆಸಲಾಗುತ್ತಿದೆ.

Point 13 ರಲ್ಲಿ ಶೋಧ ಕಾರ್ಯ

ಅನಾಮಿಕ ದೂರುದಾರ 20 ಅಡಿ ಆಳದವರೆಗೆ ಗುಂಡಿ ತೋಡಲು  ಕೋರಿದ್ದಾನೆ. ಮಳೆಯಿಂದಾಗಿ ಮಣ್ಣು ತೆಗೆಯುವಾಗ ನೀರು ಬರುತ್ತಿದೆ. ಹೀಗಾಗಿ ಪೈಪ್‌ಗಳ ಮೂಲಕ  ಹೊರ ಹಾಕಲಾಯಿತು. ಹಿಟಾಚಿ ಮೂಲಕ 22 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳಕ್ಕೆ ಗುಂಡಿ ಅಗೆದು, ಒಂದೇ ಕಡೆ ಸುಮಾರು 6 ತಾಸು ಶೋಧ ನಡೆಸಿ ಇಂದಿನ ಕಾರ್ಯಾಚರಣೆ ಅಂತ್ಯಗೊಳಿಸಲಾಗುದ್ದು,ಯಾವುದೇ ಕುರುಹು ಸಿಗಲಿಲ್ಲ.

ಮಾನವ ಹಕ್ಕು ಆಯೋಗದ ಸದಸ್ಯರೊಂದಿಗೆ ಎಸ್.ಐ.ಟಿ ತಂಡ

ಬುಧವಾರವೂ ಮಣ್ಣು ತೆಗೆಯುವ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆಯಿದೆ. ಇಂದಿನ ಕಾರ್ಯಾಚರಣೆ ಸಮಯದಲ್ಲಿ ಎರಡು ವಿದ್ಯುತ್‌ ಕಂಬಗಳಿದ್ದವು. ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಕಾರ್ಯಾಚರಣೆ ನಡೆಸಲಾಗಿತ್ತು.

ಇನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೂಡ ಭೇಟಿ ನೀಡಿ ಕಳೇಬರ ಶೋಧ ಕಾರ್ಯಕ್ಕೆ ಸಾಕ್ಷಿಯಾಯಿತು. ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಸಭೆ ನಡೆಸಿ ತನಿಖೆಯ ಮಾಹಿತಿಯನ್ನು ಪಡೆದುಕೊಂಡರು. ತನಿಖಾ ತಂಡದ ಎಸ್ಪಿ ಸೈಮನ್ ವಿವರಣೆ ನೀಡಿದರು.

Advertisement
Tags :
Casedakshina kannadaDharmasthalaDharmasthala Mass Burial CaseKannada newsKarnatakapoint 13PoliceSIT
Advertisement
Next Article
Advertisement