School holiday:ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ
ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ.
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆ ,ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ಧಾಪುರ, ಯಲ್ಲಾಪುರ, ಜೋಯಿಡಾ ತಾಲೂಕಿನ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜುಲೈ 5 ರ ವರೆಗೂ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಇಂದು ಜಿಲ್ಲೆಯ ಕಾರವಾರ,ಯಲ್ಲಾಪುರ ,ಜೋಯಿಡಾ ,ಸಿದ್ದಾಪುರ ಭಾಗದಲ್ಲಿ 100 ಮಿ.ಮೀ ಗೂ ಹೆಚ್ಚು ಮಳೆಯಾಗಿದೆ. ನಾಳೆಯೂ ಸಹ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು ಜೋಯಿಡಾ, ಯಲ್ಲಾಪುರ, ಶಿರಸಿ ,ಸಿದ್ದಾಪುರ ಭಾಗದಲ್ಲಿ ಹೆಚ್ಚಿನ ಗಾಳಿ ,ಗುಡುಗು ಸಹಿತ ಮಳೆಯಾಗಲಿದ್ದು ಈ ಭಾಗದಲ್ಲಿ 150 ಮಿ.ಮೀ ಗೂ ಹೆಚ್ಚು ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ರೆಡ್ ಅಲರ್ಟ ನೀಡಲಾಗಿದೆ.
ಈ ಹಿನ್ನಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.
ಆದೇಶ ಪ್ರತಿ:-