For the best experience, open
https://m.kannadavani.news
on your mobile browser.
Advertisement

Gokarna:ಅಹಮದಾಬಾದ್ ವಿಮಾನ ದುರಂತ -ಗೋಕರ್ಣದಲ್ಲಿ ಮೃತ 260 ಕ್ಕೂ ಹೆಚ್ಚು ಜನರ ಪಿತ್ರುಕಾರ್ಯ

ಕಾರವಾರ :- ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 171 ಜೂನ್ 12 ರಂದು ದುರಂತ ಸಂಭವಿಸಿ 260 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು.
02:38 PM Sep 12, 2025 IST | ಶುಭಸಾಗರ್
ಕಾರವಾರ :- ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 171 ಜೂನ್ 12 ರಂದು ದುರಂತ ಸಂಭವಿಸಿ 260 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು.
gokarna ಅಹಮದಾಬಾದ್ ವಿಮಾನ ದುರಂತ  ಗೋಕರ್ಣದಲ್ಲಿ ಮೃತ 260 ಕ್ಕೂ ಹೆಚ್ಚು ಜನರ ಪಿತ್ರುಕಾರ್ಯ

Gokarna:ಅಹಮದಾಬಾದ್ ವಿಮಾನ ದುರಂತ -ಗೋಕರ್ಣದಲ್ಲಿ ಮೃತ260 ಕ್ಕೂ ಹೆಚ್ಚು ಜನರ  ಪಿತ್ರುಕಾರ್ಯ

Advertisement

ಕಾರವಾರ :- ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 171 ಜೂನ್ 12 ರಂದು ದುರಂತ ಸಂಭವಿಸಿ 260 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಇದರಲ್ಲಿ ಭಾರತದ ಜೊತೆ ಲಂಡನ್ ಪ್ರಜೆಗಳು ಸಹ ಅಸುನೀಗಿದ್ದರು. ಈ ಘಟನೆ ನಡೆದು ನಾಲ್ಕು ತಿಂಗಳ ನಂತರ ಮೃತರ ಆತ್ಮಕ್ಕೆ ಶಾಂತಿಗಾಗಿ ಪಿತ್ರು ಪಕ್ಷ ಹಿನ್ನಲೆಯಲ್ಲಿ ಗೋಕರ್ಣದಲ್ಲಿ ಮೃತರ ಪಿತ್ರು ಕಾರ್ಯ ನೆರವೇರಿಸಲಾಯಿತು.

Gokarna ಬಳಿ ಮುಳುಗಿದ ಬೋಟ್ ನಾಲ್ಕು ಜನರ ರಕ್ಷಣೆ.

ಪಿತ್ರುಕಾರ್ಯಕ್ಕೆ ಪ್ರಾಮುಖ್ಯತೆ ಹೊಂದಿರುವ ಗೋಕರ್ಣದಲ್ಲಿ ಮೃತರ ಕುಟುಂಬದವರು ಪಿತ್ರುಪಕ್ಷದಲ್ಲಿ ಪಿಂಡ ಪ್ರಧಾನ ಮಾಡಿ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಬೇಡಿಕೊಳ್ಳುವುದು ಸಂಪ್ರದಾಯ. ದೇಶ ವಿದೇಶದಿಂದಲು ಕೂಡ ಪಿತ್ರುಪಕ್ಷದ ಸಂದರ್ಭದಲ್ಲಿ ಗೋಕರ್ಣಕ್ಕೆ ಬಂದು ಪಿತ್ರುಕಾರ್ಯ ನಡೆಸಿ ,ಇಲ್ಲಿಯೇ ಅಸ್ತಿ ವಿಸರ್ಜಿಸುತ್ತಾರೆ. ಹೀಗಾಗಿ ಮಹಾಬಲೇಶ್ವರ ದೇವಸ್ಥಾನ ಕಾಶಿಯಷ್ಟೇ ಪ್ರಾಮುಖ್ಯತೆ ಹೊಂದಿದೆ.

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಪುಣ್ಯಾಶ್ರಮದಲ್ಲಿ  ಅಹಮದಾಬಾದ್ ವಿಮಾನ ದುರಂತ ಮಡಿದ 261 ಕ್ಕೂ ಹೆಚ್ಚು ಜನರ ಪಿತ್ರುಕಾರ್ಯ ನಡೆಸಲಾಗಿದೆ.

ಗೋಕರ್ಣದಲ್ಲಿ ಪಿತ್ರುಕಾರ್ಯ ನಡೆಸುತ್ತಿರುವ ಮಹಾಬಲೇಶ್ವರ ದೇವಸ್ಥಾನದ ಮುಖ್ಯ ಅರ್ಚಕ ರಾಜು ಗೋಪಾಲ್ ಅಡಿ ನೇತ್ರತ್ವದ ತಂಡ

ದೇಶದಲ್ಲಿ ನಡೆದ ದೊಡ್ಡ ದುರಂತದ ಸಾಲಿಗೆ ಈ ವಿಮಾನ ದುರಂತ ಸೇರಿಹೋಗಿತ್ತು. ಹೀಗಾಗಿ ದುರಂತದಲ್ಲಿ ಮಡಿದ ಪ್ರತಿಯೊಬ್ಬರ ಹೆಸರನ್ನೂ ಸಹ ಜಾತಿ ಧರ್ಮದ ಭೇಧವಿಲ್ಲದೇ ಪಡೆದು ಅವರ ಹೆಸರಲ್ಲಿ ಎಳ್ಳು ,ನೀರಿನ ಅರ್ಗೆ ಸಮರ್ಪಿಸಿ ಪಿಂಡ ಪ್ರಧಾನ ವನ್ನು ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಮುಖ್ಯ ಅರ್ಚಕ ರಾಜು ಗೋಪಾಲ ಅಡಿಯವರು ತಮ್ಮ ಪುಣ್ಯಾಶ್ರಮದಲ್ಲಿ ನೆರವೇರಿಸಿದರು.

ವಿಮಾನ ದುರಂತದಲ್ಲಿ ಮಡಿದವರಿಗೆ ಪಿಂಡ ಪ್ರದಾನ ಮಾಡುತ್ತಿರುವುದು.

 ಗೋರ್ಣದ ಪುಣ್ಯಾಶ್ರಮದಲ್ಲಿ ಮಹಾಬಲೇಶ್ವರ ದೇವಾಲಯದ ಮುಖ್ಯ ಅರ್ಚಕ ರಾಜುಅಡಿ ರವರ ನೇತ್ರತ್ವದಲ್ಲಿ 30 ಜನ ಪುರೋಹಿತರೊಂದಿಗೆ ಈ ಪಿತ್ರುಕಾರ್ಯವನ್ನು ಕೈಗೊಳ್ಳಲಾಯಿತು. ಗುಜರಾತ್ ನ ಮಾಜಿ ಮುಖ್ಯಮಂತ್ರಿ ದಿವಂಗತ ವಿಜಯ್ ರೂಪಾನಿ ರವರಿಂದ ಹಿಡಿದು ಲಂಡನ್ ನ ಮೃತ ಪ್ರಜೆಗಳಿಗೂ ಇಲ್ಲಿ ಪಿತ್ರುಕಾರ್ಯ ನಡೆಸಲಾಯಿತು ಎರಡು ದಿನದ ಈ ಕಾರ್ಯದಲ್ಲಿ ವಿಘ್ನ ನಿವಾರಕ ಗಣಪತಿಯ ಪೂಜೆ ನಡೆಸಿ, ನಾರಾಯಣ ,ಈಶ್ವರನ ನ ನೆನೆದು ನಾರಾಯಣ ಬಲಿ, ದಶ ಪಿಂಡ ಪ್ರದಾನ ಮಾಡಲಾಯ್ತು. ನಂತರ ಗೋದಾನ, ವಸ್ತ್ರದಾನ ಮಾಡಲಾಗಿದ್ದು ಇಂದು ನೂರಾರು ಜನರಿಗೆ ಮೃತರ ಹೆಸರಿನಲ್ಲಿ ಅನ್ನ ಸಂತರ್ಪಣೆ ಕಾರ್ಯ ಸಹ ಕೈಗೊಳ್ಳಲಾಗಿದೆ.

ಈ ಕಾರ್ಯವನ್ನು ಮುಂದೆ ದೇಶದಲ್ಲಿ ಈರೀತಿಯ ಘಟನೆ ನಡೆಯದಿರಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ದೊರೆಯಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ಪಿತ್ರುಮಾಸದ ಈ ಸಂದರ್ಭದಲ್ಲಿ  ಪುಣ್ಯಾಶ್ರಮದ ಮಹಾಬಲೇಶ್ವರ ದೇವಾಲಯದ ಮುಖ್ಯ ಅರ್ಚಕ ರಾಜು ಗೋಪಾಲ ಅಡಿಯವರಿಂದ ಪಿತ್ರುಕಾರ್ಯ ನೆರವೇರಿಸಲಾಗಿದೆ.

ಕಾರವಾರದ ಗಿಲಾನಿ ಸೂಪರ್ ಮಾರ್ಕೆಟ್ ನಲ್ಲಿ ಭರ್ಜರಿ ಆಫರ್ ,ಗ್ರೂಸರಿ ಕರೀದಿ ದಾರರಿಗೆ ಸಿಗಲಿದೆ ಬಂಪರ್ ಬಹುಮಾನ

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ