ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Honnavar:ತುಂಬಿದ ಲಿಂಗನಮಕ್ಕಿ ಜಲಾಶಯದಿಂದ ಆ19 ನೀರು ಬಿಡುಗಡೆ 

Uttara Kannada ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದ ಜಲಾಶಯಗಳು ಭರ್ತಿಯಾಗಿದ್ದು ಲಿಂಗನಮಕ್ಕಿ ಆಣೆಕಟ್ಟಿನಿಂದ ಆಗಷ್ಟ್ 19 ರಂದು ನೀರು ಬಿಡುಗಡೆ ಗೊಳಿಸಲಿದ್ದಾರೆ.
10:39 PM Aug 18, 2025 IST | ಶುಭಸಾಗರ್
Uttara Kannada ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದ ಜಲಾಶಯಗಳು ಭರ್ತಿಯಾಗಿದ್ದು ಲಿಂಗನಮಕ್ಕಿ ಆಣೆಕಟ್ಟಿನಿಂದ ಆಗಷ್ಟ್ 19 ರಂದು ನೀರು ಬಿಡುಗಡೆ ಗೊಳಿಸಲಿದ್ದಾರೆ.

Honnavar:ತುಂಬಿದ ಲಿಂಗನಮಕ್ಕಿ ಜಲಾಶಯದಿಂದ ಆ19 ನೀರು ಬಿಡುಗಡೆ 

Advertisement

ಕಾರವಾರ:- ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಆ.20 ಬೆಳಗ್ಗೆ 8.30 ಗಂಟೆಯವರೆೆ ರೆಡ್ ಅಲರ್ಟ್  ಘೋಷಿಸಲಾಗಿದೆ.

ಉತ್ತರ ಕನ್ನಡ(uttara Kannada) ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತಿದ್ದು ಶರಾವತಿ ನದಿ ಗೆ ನೀರಿನ ಪ್ರಮಾಣ ಹೆಚ್ಚಿನದಾಗಿ ಹರಿದು ಬರುತ್ತಿದೆ.

ಇನ್ನು ಶರಾವತಿ ನದಿಯಿಂದಾಗಿ ಲಿಂಗನಮಕ್ಕಿ (linganamakki) ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರಿಕೆಯಾಗಿದೆ.

ಇದನ್ನೂ ಓದಿ:-Karwar : ಸಮುದ್ರ ತೀರಕ್ಕೆ ತೇಲಿಬಂದ ಡಾಲ್ಪಿನ್ |ವಿಡಿಯೋ ನೋಡಿ

Advertisement

ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಆ.18 ರಂದು ಮಧ್ಯಾಹ್ನ 1 ಗಂಟೆಗೆ ಜಲಾಶಯದ ನೀರಿನ ಮಟ್ಟವು 1815.50 ಅಡಿಗಳಿಗೆ ತಲುಪಿರುತ್ತದೆ. ಈ ದಿನ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 59,891 ಕ್ಯೂಸೆಕ್ ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಇದನ್ನೂ ಓದಿ:-Dandeli : ಕುಟುಂಬಸ್ತರಿಂದಲೇ ಸರಪಳಿಯಲ್ಲಿ ಬಂದಿಯಾದ ಮಾನಸಿಕ ಅಸ್ವಸ್ತನ ರಕ್ಷಣೆ 

ಅದರಂತೆ, ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಆ.19 ರಂದು ಬೆಳಗ್ಗೆ 10 ಗಂಟೆಯಿಂದ ಹೊರಬಿಡಲಾಗುವುದೆಂದು ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಕೆ ಪಿ ಸಿ ಲಿಂಗನಮಕ್ಕಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಲಿಂಗನಮಕ್ಕಿ ಜಲಾಶಯದ ತಗ್ಗು ಪ್ರದೇಶದಲ್ಲಿ ಶರಾವತಿ ನದಿಯ ಇಕ್ಕೆಲಗಳ ಪ್ರದೇಶದಲ್ಲಿರುವ ಹೊನ್ನಾವರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ತಳಮಟ್ಟದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಪ್ರವಾಹ ಸಂಭವನೀಯ ಸ್ಥಳಗಳ ಸಾರ್ವಜನಿಕರು ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯಲು ತಿಳಿಸಲಾಗಿದೆ.

ಶರಾವತಿ ನದಿಯ(sharavathi river) ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರ ಕುರಿತು ಕಾಳಜಿ ಕೇಂದ್ರಗಳನ್ನು ಅಣಿಗೊಳಿಸಲಾಗಿದ್ದು, ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿಯ ಒಳಗೆ ಅಥವಾ ಅದರ ಸುತ್ತಲಿನ ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ.

 

Advertisement
Tags :
ahivamiggaDamdam water releaseHonnavarKarnatakaLinganamakki damRainUttara KannadaWater
Advertisement
Next Article
Advertisement